Belagavi News In Kannada | News Belgaum

ಸಂತ್ರಸ್ತೆ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಜಮೀನು ಮಂಜೂರಾತಿ ಪತ್ರ ಹಸ್ತಾಂತರಿಸಿದ ಸಚಿವ ಸತೀಶ್​ ಜಾರಕಿಹೊಳಿ

ಬೆಳಗಾವಿ: ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿರುವ ಹಿನ್ನೆಲೆಯಲ್ಲಿ, ಸಂತ್ರಸ್ತ ಮಹಿಳೆಯ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪರಿಹಾರ ಚೆಕ್ ಹಸ್ತಾಂತರಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಸಂತ್ರಸ್ತೆ ಮಹಿಳೆ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿದ ಸಚಿವರು, ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸುವ ಕುರಿತು ಭರವಸೆ ನೀಡಿದರು.
ಅದಲ್ಲದೆ ಸಂತ್ರಸ್ತ ಕುಟುಂಬಕ್ಕೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಮಂಜೂರಾಗಿರುವ 2.03 ಎಕರೆ ಜಮೀನು ಮಂಜೂರಾತಿ ಆದೇಶ ಪ್ರತಿ ಕೂಡ ಇದೇ ವೇಳೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಸವರಾಜ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.//////