Belagavi News In Kannada | News Belgaum

ರಾಜಾ ವೀರ ಮದಕರಿ ನಾಯಕ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿಗಳಿಗೆ ಪುಷ್ಪ ನಮನ ಸಲ್ಲಿಸಿದ ಯುವ ನಾಯಕ ರಾಹುಲ್‌ ಜಾರಕಿಹೊಳಿ

ಚಿತ್ರದುರ್ಗ: ವಾಲ್ಮೀಕಿ ಸಮುದಾಯ ಸರ್ವ ರೀತಿಯಲ್ಲಿ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡಬೇಕು. ಶಿಕ್ಷಣವಂತರಾದಾಗ ಮಾತ್ರ ಸಮಾಜವು ಪ್ರಗತಿಯತ್ತ ಸಾಗಲು ಸಾಧ್ಯ. ಸಮಾಜದ ಮುಂದಿನ ಪೀಳಿಗೆಯ ಭವಿಷ್ಯ ರೂಪಿಸಲು ಶಿಕ್ಷಣಕ್ಕೆ ನಾವೆಲ್ಲರೂ ಹೆಚ್ಚಿನ ಆದ್ಯತೆ ನೀಡೋಣ ಎಂದು ಯುವ ನಾಯಕ, ಸತೀಶ್‌ ಶುಗರ್ಸ್‌ ನಿರ್ದೇಶಕ ರಾಹುಲ್‌ ಜಾರಕಿಹೊಳಿ ಅವರು ಹೇಳಿದರು..

.

ನಗರದ ತರಾಸು ರಂಗಮಂದಿರದಲ್ಲಿ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಹಮ್ಮಿಕೊಂಡಿದ್ದ ಸನ್ಮಾನ  ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. .

ರಾಜನಹಳ್ಳಿಯ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಅವರ ನಿರಂತರ ಹೋರಾಟದ ಫಲವಾಗಿ ವಾಲ್ಮೀಕಿ ನಾಯಕ ಸಮುದಾಯಕ್ಕೆ ಎಸ್‍ಟಿ ಮೀಸಲಾತಿ ಹೆಚ್ಚಿಸಿತು. ಹೀಗಾಗಿ ಪ್ರಸನ್ನಾನಂದ ಶ್ರೀಗಳ ನೇತೃತ್ವದಲ್ಲಿ ಸಮುದಾಯದ ಅಭಿವೃದ್ಧಿಗೆ ನಾವೆಲ್ಲರೂ ಶ್ರಮೀಸೋಣ ಎಂದು ತಿಳಿಸಿದರು. 

ಇದೇ ವೇಳೆ 2022-23ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ, ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ, ಬಿಎಸ್‍ಡಬ್ಲ್ಯೂ, ಇಂಜಿನಿಯರಿಂಗ್, ಎಂಬಿಬಿಎಸ್, ಇತರೆ ಪದವಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಪಿಹೆಚ್‍ಡಿ ಪದವಿ ಪಡೆದ, ನಾಯಕ ಸಮಾಜದ 96 ಜನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸಮಾಜದ ಸಾಧಕರಾದ ನಿವೃತ್ತ ಡಿಐಜಿ ಎಂ.ಎನ್.ನಾಗರಾಜ್, ಹಿರಿಯ ಪತ್ರಕರ್ತರು ಹಾಗೂ ಜಿಲ್ಲಾ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಪತ್ರಕರ್ತರಾದ  ಎಂ.ಎನ್.ಅಹೋಬಲಪತಿ ಹಾಗೂ ಉದ್ಯಮಿ ಹಾಗೂ ಜಿಲ್ಲಾ ವಾಲ್ಮೀಕಿ ಪ್ರಶಸ್ತಿ ಪುರಸ್ಕೃತ ಪಿ.ವಿ. ಅರುಣ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. 

ರಾಜನಹಳ್ಳಿಯ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಚಿತ್ರದುರ್ಗ ನಗರಕ್ಕೆ  ಇಂದು ಭೇಟಿ‌ ನೀಡಿದ ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದ ಪುರಿ ಅವರ ಜತೆ ರಾಜಾ ವೀರ ಮದಕರಿ ನಾಯಕ ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿಗಳಿಗೆ ಪುಷ್ಪ ನಮನಗಳನ್ನು ಸಲ್ಲಿಸಿದರು. 

ಈ ಸಂದರ್ಭದಲ್ಲಿ ಶಾಸಕರಾದ ಟಿ. ರಘುಮೂರ್ತಿ, ಎನ್.ವೈ. ಗೋಪಾಲಕೃಷ್ಣ, ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ. ಹೆಚ್. ಗುಡ್ಡದೇಶ್ವರಪ್ಪ, ಚಿತ್ರದುರ್ಗ ನಾಯಕ ಸಮಾಜದ ಅಧ್ಯಕ್ಷ ಬಿ.ಕಾಂತರಾಜು, ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ. ಕೃಷ್ಣಮೂರ್ತಿ, ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕೃತಿಕ ಸಂಘದ ಪ್ರಧಾನ ಕಾರ್ಯದರ್ಶಿ ಆರ್. ನಾಗೇಂದ್ರಬಾಬು, ಖಜಾಂಚಿ ಎಸ್.ಬಿ. ರವಿಶಂಕರ್, ಉಪಾಧ್ಯಕ್ಷ ಜೆ.ಎಸ್. ರವಿಕುಮಾರ್, ಜಂಟಿ ಕಾರ್ಯದರ್ಶಿಗಳಾದ ಕೆ.ನಾಗರಾಜ್, ಹೆಚ್.ತಿಪ್ಪಯ್ಯ ಹಾಗೂ ಸಹಾಯಕ ಅಭಿಯಂತರ ಬಸವರಾಜ ಟಿ.ಗೊರವರ್ ಸೇರಿದಂತೆ ಅನೇಕರು ಇದ್ದರು.////