Belagavi News In Kannada | News Belgaum

ಚುನಾವಣೆ: ಮಂಡ್ಯದಿಂದಲೇ ಸ್ಪರ್ಧೆ ಎಂದ ಸಂಸದೆ ಸುಮಲತಾ..

ಮಂಡ್ಯ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದಲೇ ಸ್ಪರ್ಧೆ ಖಚಿತ. ಈ ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಸಂಸದೆ ಸುಮಲತಾ ಹೇಳಿದರು..

 

ಮದ್ದೂರಿನಲ್ಲಿ ಶನಿವಾರ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿದ ಅವರು ‘ ಈ ಚುನಾವಣೆಯಲ್ಲಿಯೂ ಸ್ಪರ್ಧೆ ಮಾಡುತ್ತೇನೆ. ಮುಂದೆ ಎಲ್ಲ ವಿಷಯವನ್ನೂ ತಿಳಿಸುತ್ತೇನೆ’ ಎಂದಷ್ಟೇ ಹೇಳಿದರು. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಹಾಗೂ ಕ್ಷೇತ್ರ ಹಂಚಿಕೆ ಕುರಿತು ಪ್ರತಿಕ್ರಿಯಿಸಿ ‘ ಮೈತ್ರಿ ವಿಚಾರ ನನಗೆ ಗೊತ್ತಿಲ್ಲ. ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದೂ ಇಲ್ಲ’ ಎಂದರು..

 

‘ ಮಂಡ್ಯ ಸೇರಿದಂತೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಂಸತ್‌ ಅಧಿವೇಶನದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇನೆ. ಕಾವೇರಿ ವಿಚಾರ ಎಂದು ಬಂದಾಗ ನಾವು ಒಬ್ಬರನ್ನು ದೂಷಿಸುವುದು ಸರಿಯಲ್ಲ. ನ್ಯಾಯಾಲಯಗಳಲ್ಲಿ ಎಂದೂ ಕರ್ನಾಟಕಕ್ಕೆ ನ್ಯಾಯ ದೊರೆತಿಲ್ಲ. ಎರಡೂ ರಾಜ್ಯ ಸರ್ಕಾರಗಳು ಕುಳಿತು ಮಾತನಾಡಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು   ..////