Belagavi News In Kannada | News Belgaum

ಪಶು ಪ್ರಾಣಿ ಬಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಮನವಿ

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರಿನ ಯಲ್ಲಮ್ಮ ದೇವಿ ಜಾತ್ರೆಯಲ್ಲಿ ಪ್ರಾಣಿಬಲಿ ನಿಷೇಧಿಸುವಂತೆ ಒತ್ತಾಯಿಸಿ ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ, ಪಶು ಪ್ರಾಣಿ ಬಲಿ ನಿರ್ಮೂಲನ ಜಾಗೃತಿ ಮಹಾಸಂಘ ಹಾಗೂ ಬಸವ ಧರ್ಮ ಜ್ಞಾನ ಪೀಠದ ಅಧ್ಯಕ್ಷರಾದ ದಯಾನಂದ ಸ್ವಾಮೀಜಿ ಅವರು ಶುಕ್ರವಾರ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಉಪಸ್ಥಿತರಿದ್ದರು.