Belagavi News In Kannada | News Belgaum

ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ ಎಂದ ಡಾ. ಜಿ. ಪರಮೇಶ್ವರ್‌..

ಬೆಂಗಳೂರು: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಣಿಗೆ ಕೊಟ್ಟಿದ್ದೇನೆ. ಇದು ನನ್ನ ವೈಯಕ್ತಿಕ ವಿಚಾರ. ಎಷ್ಟು ದೇಣಿಗೆ ನೀಡಿದ್ದೇನೆ ಎಂದು ಹೇಳಿಕೊಳ್ಳಬಾರದು ಎಂದರು.

ಅಯೋಧ್ಯೆ ಪೂಜೆಯಲ್ಲಿ ಭಾಗಿಯಾಗುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಪ್ರತ್ಯೇಕ ದಿನ ಹೋಗಿ ಪೂಜೆ ಸಲ್ಲಿಸುವ ಬಗ್ಗೆ ಹೈಕಮಾಂಡ್ ನಿರ್ಧರಿಸಿದರೆ ಅದಕ್ಕೂ ಸಿದ್ಧ. ವಿಶೇಷ ಪೂಜೆ ಸಲ್ಲಿಸುತ್ತೇವೆ. ನಾವು ಹಿಂದುಗಳಲ್ವ? ನಮ್ಮ ಪಕ್ಷದಲ್ಲಿಯೂ ಹಿಂದುಗಳಿಲ್ಲವೇ? ಅದರಲ್ಲೇನು ತಪ್ಪಿದೆ ಎಂದಿದ್ದಾರೆ.