Belagavi News In Kannada | News Belgaum

ಲೋಕಾಯುಕ್ತ ಜನ ಸಂಪರ್ಕ ಸಭೆ ಜ.10 ರಂದು

ಬೆಳಗಾವಿ: ಜ 09:  ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಾ ಪಂಚಾಯತ ಸಭಾ ಭವನದಲ್ಲಿ ಜ. 10, 2024 ರಂದು ಬೆಳಿಗ್ಗೆ 11 ಗಂಟೆಯಿಂದ 2 ಗಂಟೆಯವರೆಗೆ ಸಭೆ ನಡೆಯಲಿದೆ.
ಬೆಳಗಾವಿ ಲೋಕಾಯುಕ್ತ ಅಧಿಕಾರಿಗಳು ರಾಮದುರ್ಗ ತಾಲೂಕಿನ ಎಲ್ಲ ತಾಲೂಕಾ ಮಟ್ಟದ ಅಧಿಕಾರಿಗಳ ಸಮಕ್ಷಮದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಿದ್ದಾರೆ.
ಸರ್ಕಾರಿ ಕಛೇರಿಯಲ್ಲಿಯ ಅಧಿಕಾರಿಗಳು ಸಾರ್ವಜನಿಕರ ಅಧಿಕೃತ ಕೆಲಸಗಳÀನ್ನು ಮಾಡಿಕೊಡುವಲ್ಲಿ ವಿಳಂಬ ನೀತಿ
ಅನುಸರಿಸುತ್ತಿದ್ದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದಲ್ಲಿ, ಸ್ಥಳದಲ್ಲಿಯೇ ಅಧಿಕಾರಿಗಳಿಂದ ಪರಿಹರಿಸಿಕೊಳ್ಳಬಹುದಾಗಿದು, ಅರ್ಜಿ ಸಲ್ಲಿಸಲು ಇಚ್ಛಿಸುವವರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಹಾಜರಿರಬೇಕು.
ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಿಕೊಡುವಲ್ಲಿ ಹಣಕ್ಕೆ ಬೇಡಿಕೆ ಇಟ್ಟಲ್ಲಿ, ಒತ್ತಾಯಿಸಿದಲ್ಲಿ ಅಥವಾ ಸರ್ಕಾರಿ ಅಧಿಕಾರಿಯ ಅಕ್ರಮ ಆಸ್ತಿ ಸಂಪಾದನೆ ಬಗ್ಗೆ ಮಾಹಿತಿ ಇದ್ದಲ್ಲಿ, ಲೋಕಾಯುಕ್ತ ಅಧಿಕಾರಿಗಳೊಂದಿಗೆ ನೇರವಾಗಿ, ಗುಪ್ತವಾಗಿ ಮಾಹಿತಿ ನೀಡಿ, ಸದರಿ ಸಭೆಯ ಸದುಪಯೋಗ ಪಡಿಸಿಕೊಳ್ಳಬೇಕು.
ಹೆಚ್ಚಿನ ವಿವರಗಳಿಗಾಗಿ ಈ ಕಛೇರಿ ದೂರವಾಣಿ ಸಂಖ್ಯೆ 0831-2950756 ಅಥವಾ 0831-2421922 ಗೆ
ಸಂಪರ್ಕಿಸಬಹುದು ಎಂದು ಬೆಳಗಾವಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.