Belagavi News In Kannada | News Belgaum

ಕುಡಿದು ನಡುರಸ್ತೆಯಲ್ಲೇ ಗಾಢ ನಿದ್ದೆಗೆ ಜಾರಿದ ಭೂಪ.!

ಚಿಕ್ಕಮಗಳೂರು: ಕುಡಿತ ಮತ್ತಿನಲ್ಲಿ ವ್ಯಕ್ತಿ ಮಧ್ಯರಾತ್ರಿ ಸಮಯದಲ್ಲಿ ರಸ್ತೆ ಮಧ್ಯೆಯೇ ಗಡದ್ದಾಗಿ ನಿದ್ದೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಜನ್ನಾಪುರ ಸಮೀಪದ ಹಳಸೆ ಗ್ರಾಮದ ಬಳಿ ನಡೆದಿದೆ.

ಕುಡಿತ ಮತ್ತಿನಲ್ಲಿ ವ್ಯಕ್ತಿ ಮಧ್ಯರಾತ್ರಿ ಸಮಯದಲ್ಲಿ ರಸ್ತೆ ಮಧ್ಯೆಯೇ ಗಡದ್ದಾಗಿ ನಿದ್ದೆ ಮಾಡಿದ್ದಾಳೆ. ಈ ವೇಳೆ ಅದೇ ದಾರಿಯಲ್ಲಿ ಬರುತ್ತಿದ್ದ ವಾಹನ ಸಾವರರೊಬ್ಬರು ವ್ಯಕ್ತಿಯನ್ನು ಕಂಡು ಗಾಬರಿಗೊಂಡಿದ್ದಾರೆ.
ಚಾಲಕರು ಎಷ್ಟೇ ಹಾರ್ನ್ ಮಾಡಿದರೂ ವ್ಯಕ್ತಿ ಎದ್ದೇಳುವ ಲಕ್ಷಣ ಕಾಣುತ್ತಿಲ್ಲ. ಆ ಬಳಿಕ ಕೆಲ ಹೊತ್ತು ಎದ್ದು ಕುಳಿತು ಮತ್ತೆ ಅದೇ ಜಾಗದಲ್ಲಿ ಮಲಗಿದ್ದಾನೆ. ಒಟ್ಟಾರೆಯಾಗಿ ಎಣ್ಣೆ ಮತ್ತಿನಲ್ಲಿ ವ್ಯಕ್ತಿಯ ಚೆಲ್ಲಾಟದಿಂದ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ.