Belagavi News In Kannada | News Belgaum

ಸಾರ್ವಜನಿಕರ ಗಮನಕ್ಕೆ

ಲೋಕ ಅದಾಲತ ಮಾ.9 ರಂದು

ಬೆಳಗಾವಿ,ಜ.18: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ವೈವಾಹಿಕ, ಕೌಟುಂಬಿಕ ಮತ್ತು ಪಾಲು ವಿಭಾಗಕ್ಕೆ, ಬ್ಯಾಂಕುಗಳಿಗೆ ಸಂಬಂಧಪಟ್ಟ ಪ್ರಕರಣಗಳು ಹಾಗೂ ಚೆಕ್ ಬೌನ್ಸ, ಭಾರತ ದಂಡ ಸಂಹಿತೆಯ ರಾಜಿಯಾಗಬಲ್ಲ ಪ್ರಕರಣಗಳು, ಹಣಕಾಸಿನ ದಾವೆಗಳು, ಸಿವಿಲ್ ವ್ಯಾಜ್ಯಗಳು, ಮೋಟಾರ ವಾಹನ ಅಪಘಾತ ಪರಿಹಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಕಂದಾಯ ಪ್ರಕರಣಗಳು ಮತ್ತು ಇತರ ಎಲ್ಲಾ ರೀತಿಯ ರಾಜಿಯಾಗು ಪ್ರಕರಣಗಳ ಕುರಿತು ಹಾಗೂ ನ್ಯಾಯಾಲಯಗಳಲ್ಲಿ ತನಿಕೆಗೆ ಬಾಕಿ ಇರುವ ಪ್ರಕರಣಗಳ ಕುರಿತು ಬೆಳಗಾವಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶರಾದ ಗೌರವಾನ್ವಿತ ಎಲ್. ವಿಜಯಲಕ್ಷ್ಮೀ ದೇವಿ ಇವರ ಮಾರ್ಗದರ್ಶನದಲ್ಲಿ ಬೆಳಗಾವಿಯ ಎಲ್ಲ ನ್ಯಾಯಾಲಯಗಳಲ್ಲಿ ಹಾಗೂ ಎಲ್ಲಾ ತಾಲೂಕುಗಳ ನ್ಯಾಯಾಲಯಗಳಲ್ಲಿ ಮಾರ್ಚ:09 24 ರಂದು ಬೆಳಿಗ್ಗೆ 11 ಘಂಟೆಯಿಂದ ಜಿಲ್ಲೆಯ ಎಲ್ಲಾ ನ್ಯಾಯಾಧೀಶರ ಹಾಗೂ ವಕೀಲರ ಸಹಯೋಗದಲ್ಲಿ ಲೋಕ ಅದಾಲತನ್ನು ಹಮ್ಮಿಕೊಳ್ಳಲಾಗಿದೆ.
ಸದರಿ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ತೆಗೆದುಕೊಂಡು ರಾಜಿ ಸಂಧಾನದ ಮುಖಾಂತರ ಇತ್ಯರ್ಥಪಡಿಸಲಾಗುವುದು.
ಬ್ಯಾಂಕುಗಳು, ಕಕ್ಷಿದಾರರು ಹಾಗೂ ಜನ ಸಾಮಾನ್ಯರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಳಗಾವಿ ತಾಲೂಕಾ ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರ ಗಮನಕ್ಕೆ

 

ಬೆಳಗಾವಿ,ಜ.18: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬೆಳಗಾವಿ ಜಿಲ್ಲೆಯ, ರಾಯಭಾಗ ತಾಲೂಕಿನ ಹಾಲಿ ಚಾಲ್ತಿಯಲ್ಲಿರುವ 110ಕೆವಿ ರಾಯಭಾಗ-ಇಟ್ನಾಳ ವಿದ್ಯುತ್ ಪ್ರಸರಣ ಮಾರ್ಗದಿಂದ ‘ಬೊಮ್ಮನಾಳ’ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿರುವ 110/11ಕೆವಿ ವಿದ್ಯುತ್ ಉಪ-ಕೇಂದ್ರಕ್ಕೆ ಲೀಲೋ 0.559ಕಿ.ಮೀ ಉದ್ದದ ವಿದ್ಯುತ್ ಪ್ರಸರಣ ಮಾರ್ಗವನ್ನು ನಿರ್ಮಿಸಲಾಗಿದೆ.
ಸದರಿ 110 ಕೆವಿ ವಿದ್ಯುತ್ ಪ್ರಸರಣ ಮಾರ್ಗವು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ನಿಡಗುಂದಿ ಹಾಗೂ ಬೊಮ್ಮನಾಳ ಅಕ್ಕಪಕ್ಕದ ಹದ್ದಿನಲ್ಲಿ ಬರುವ ಹಳ್ಳಿಗಳು ಮತ್ತು ಸರಹದ್ದಿನ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಹಾಯ್ದು ಹೋಗುತ್ತದೆ.

ವಿದ್ಯುತ್ ಪ್ರಸರಣ ಮಾರ್ಗವನ್ನು ಜ 25 2024 ರಂದು ಇಲ್ಲವೆ ತದನಂತರ ಯಾವುದೇ ಕ್ಷಣದಲ್ಲಿ ವಿದ್ಯುತ್ ಹರಿಬಿಡಲಾಗುವದು, ಕಾರಣ ವಿದ್ಯುತ್ ಗೋಪುರಗಳನ್ನು ಹತ್ತುವುದಾಗಲಿ ಅಥವಾ ತಂತಿಗಳನ್ನು ಮುಟ್ಟುವುದಾಗಲಿ ಹಸಿರು ಟೊಂಗೆಗಳನ್ನು ಎಸೆಯುವುದಾಗಲಿ ಮತ್ತು ಲೈನ್ ಕೆಳಗಡೆ ದನಕರುಗಳನ್ನು ಕಟ್ಟುವುದಾಗಲಿ, ಗಿಡಮರಗಳನ್ನು ನೆಡುವುದಾಗಲಿ, ಮನೆ/ಗುಡಿಸಲುಗಳನ್ನು ನಿರ್ಮಿಸುವುದಾಗಲಿ ಪ್ರಾಣಾಪಾಯಕವಾಗುವುದು ಎಂದು ಸಾರ್ವಜನಿಕರಿಗೆ ತಿಳಿಸಲಾಗಿದೆ.
ಒಂದು ವೇಳೆ ಇಂತಹ ಕೃತ್ಯಗಳನ್ನು ಯಾರಾದರು ಎಸಗಿದಲ್ಲಿ ಮುಂದೆ ಒದಗಬಹುದಾದ ಅಪಾಯಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಜವಾಬ್ದಾರಿಯಾಗಿರುವುದಿಲ್ಲ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ವಿ), ಬೃಹತ್ ಕಾಮಗಾರಿ ವಿಭಾಗ ಕಾರ್ಯನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ಹರಿವು ಸಾರ್ವಜನಿಕರಿಗೆ ಎಚ್ಚರಿಕೆ

ಬೆಳಗಾವಿ,ಜ.18: ಬೆಳಗಾವಿ ಜಿಲ್ಲೆಯ, ಗೋಕಾಕ ತಾಲೂಕಿನ ಹಾಲಿ ಚಾಲ್ತಿಯಲ್ಲಿರುವ 110ಕೆವಿ. ಪಿ. ಜಿ. ಹುನಶ್ಯಾಳ ವಿದ್ಯುತ್ ಉಪ ಕೇಂದ್ರದಿಂದ ಹಡಗಿನಾಳ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿರುವ ವಿದ್ಯುತ್ ಉಪಕೇಂದ್ರಕ್ಕೆ ಜೋಡಿ ಗೋಪುರಗಳ ಮೇಲೆ 6,525ಕೀ.ಮಿ ಉದ್ದದ ಒಂಟಿ ವಿದ್ಯುತ್ ಪ್ರಸರಣ ಮಾರ್ಗವನ್ನು ನಿರ್ಮಿಸಲಾಗಿದೆ
ಸದರಿ 110 ಕೆವಿ ವಿದ್ಯುತ್ ಪ್ರಸರಣ ಮಾರ್ಗವು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಪಿ. ಜಿ. ಹುನಶ್ಯಾಳ, ಬೀರನಗುಡ್ಡಿ, ಕಲಾರಕೊಪ್ಪ ಹಾಗೂ ಹಡಗಿನಾಳ ಅಕ್ಕಪಕ್ಕದ ಹದ್ದಿನಲ್ಲಿ ಬರುವ ಹಳ್ಳಿಗಳು ಮತ್ತು ಸರಹದ್ದಿನ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಹಾಯ್ದು ಹೋಗುತ್ತದೆ.
ವಿದ್ಯುತ್ ಪ್ರಸರಣ ಮಾರ್ಗವನ್ನು ಜ 25 ರಂದು ಇಲ್ಲವೆ ತದನಂತರ ಯಾವುದೇ ಕ್ಷಣದಲ್ಲಿ ವಿದ್ಯುತ್ತನ್ನು ಹರಿಬಿಡಲಾಗುವದು ಕಾರಣ ವಿದ್ಯುತ್ ಗೋಪುರಗಳನ್ನು ಹತ್ತುವುದಾಗಲಿ ಅಥವಾ ತಂತಿಗಳನ್ನು ಮುಟ್ಟುವುದಾಗಲಿ ಹಸಿರು ಟೊಂಗೆಗಳನ್ನು ಎಸೆಯುವುದಾಗಲಿ ಮತ್ತು ಲೈನ್ ಕೆಳಗಡೆ ದನಕರುಗಳನ್ನು ಕಟ್ಟುವುದಾಗಲಿ, ಗಿಡಮರಗಳನ್ನು ನೆಡುವುದಾಗಲಿ, ಮನೆ/ಗುಡಿಸಲುಗಳನ್ನು ನಿರ್ಮಿಸುವುದಾಗಲಿ ಪ್ರಾಣಾಪಯವಾಬಹುದು ಎಂದು ಸಾರ್ವಜನಿಕರಿಗೆ ತಿಳಿಸಲಾಗಿದೆ.
ಒಂದು ವೇಳೆ ಇಂತಹ ಕೃತ್ಯಗಳನ್ನು ಯಾರಾದರು ಎಸಗಿದಲ್ಲಿ ಮುಂದೆ ಒದಗಬಹುದಾದ ಅಪಾಯಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಜವಾಬ್ದಾರಿಯಾಗಿರುವುದಿಲ್ಲ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ವಿ), ಬೃಹತ್ ಕಾಮಗಾರಿ ವಿಭಾಗ ಕಾರ್ಯನಿರ್ವಾಹಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ-2024 ಜಾಗೃತಿ ವ್ಯಂಗ್ಯಚಿತ್ರಗಳ ಆಯ್ಕೆ

ಬೆಳಗಾವಿ,ಜ.18: ಬೆಂಗಳೂರು, ಜನವರಿ 18 ಮುಂಬರುವ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತದಾರರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿವತಿಯಿಂದ ಜನವರಿ 21 ರಂದು ಬೆಳಗ್ಗೆ 9 ಗಂಟೆಯಿಂದ ಕಲಾವಿದರಿಗಾಗಿ ‘ವ್ಯಂಗ್ಯಚಿತ್ರ ಪ್ರದರ್ಶನ ಮತ್ತು ಕಾರ್ಯಾಗಾರ’ವನ್ನು ವಿಧಾನಸೌಧ ಪೂರ್ವದಿಕ್ಕಿನ ಬಸವಣ್ಣನ ಪ್ರತಿಮೆ ಎದುರುಗಡೆಯಲ್ಲಿ ಏರ್ಪಡಿಸಲಾಗಿದೆ.
ವೃತ್ತಿಪರ ಮತ್ತು ಹವ್ಯಾಸಿ ವ್ಯಂಗ್ಯಚಿತ್ರಕಾರರು, ಹವ್ಯಾಸಿ ಕಲಾವಿದರು, ಕಲಾ ವಿದ್ಯಾರ್ಥಿಗಳು ಈ ಜಾಗೃತಿ ಅಭಿಯಾನದಲ್ಲಿ ಭಾಗವಹಿಸಬಹುದಾಗಿದೆ.
ಚುನಾವಣೆ, ಮತದಾನದ ಮಹತ್ವ ಸಾರುವ, ಮತದಾನ ಪ್ರಕ್ರಿಯೆಯಲ್ಲಿ ನಾಗರಿಕರು ಭಾಗವಹಿಸುವುದನ್ನು ಪೆÇ್ರೀತ್ಸಾಹಿಸುವಂತಹ ವ್ಯಂಗ್ಯಚಿತ್ರಗಳನ್ನು ರಚಿಸಬೇಕು. ಆಯ್ಕೆಯಾದ 100 ವ್ಯಂಗ್ಯಚಿತ್ರಗಳನ್ನು ಜ.21ರಂದು ಪ್ರದರ್ಶನಕ್ಕೆ ಇರಿಸಲಾಗುತ್ತದೆ. ಅತ್ಯುತ್ತಮ 25 ಚಿತ್ರಗಳನ್ನು ಮತದಾನ ಜಾಗೃತಿ, ಪ್ರಚಾರಕ್ಕಾಗಿ ಬಳಸಿಕೊಳ್ಳಲಾಗುತ್ತದೆ ಹಾಗೂ ಆ ವ್ಯಂಗ್ಯಚಿತ್ರಗಳಿಗೆ ಗೌರವಧನವನ್ನು ಸಹ ನೀಡಲಾಗುತ್ತದೆ.

ಷರತ್ತು ಹಾಗು ನಿಬಂಧನೆಗಳು
• ಚಿತ್ರಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಪ್ರಚಾರ ಮತ್ತು ವ್ಯಂಗ್ಯ ಇರಬಾರದು
• ಚಿತ್ರಗಳು ಹೊಸದಾಗಿದ್ದು, ಈ ಹಿಂದೆ ಯಾವುದೇ ಪ್ರಚಾರದಲ್ಲಿ ಬಳಸಿಕೊಂಡಿರಬಾರದು.
• ಚಿತ್ರಗಳು ಸ್ವಂತ ರಚನೆಯಲ್ಲಿರಬೇಕು. (ಗ್ರಾಫಿಕ್ಸ್, ಕುಂಚ, ಪೆನ್ಸಿಲ್, ಪೆನ್ ಇತ್ಯಾದಿ) ಚಿತ್ರಗಳನ್ನು 1800ಘಿ2400 ಅಳೆತೆಯ ಡಿಜಿಟಲ್ ಆವೃತ್ತಿಯಲ್ಲಿ ಸಲ್ಲಿಸಬೇಕು.
• ಆಯ್ಕೆಯಾದ ಚಿತ್ರಗಳ ಅಸಲಿ ಪ್ರತಿಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಆಯ್ಕೆಯಾದ ಮೊದಲ 25 ಚಿತ್ರಗಳಿಗೆ ಗೌರವಧನ ನೀಡಲಾಗುವುದು.
• ಚಿತ್ರಗಳನ್ನು mediacellceokarnataka@gmail.com ವಿಳಾಸಕ್ಕೆ ಕಳುಹಿಸ ಬೇಕು ಹಾಗೂ ಇಮೇಲ್ನಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಮೋಬೈಲ್ ಸಂಖ್ಯೆಯನ್ನು ತಪ್ಪದೇ ನಮೂದಿಸಿರಬೇಕು.
• ಚಿತ್ರಗಳನ್ನು ಕಳುಹಿಸಲು ಕೊನೆಯ ದಿನಾಂಕ 19-01-2024 ಸಂಜೆ 5:00 ಗಂಟೆಯ ಒಳಗಾಗಿ
• ಚಿತ್ರಗಳನ್ನು ಆಯ್ಕೆ ಮಾಡುವ ಹಾಗೂ ತಿರಸ್ಕರಿಸುವ ಅಧಿಕಾರ ಮುಖ್ಯ ಚುನಾವಣಾಧಿಕಾರಿ ಕರ್ನಾಟಕ, ಇವರಿಗೆ ಇರುತ್ತದೆ.
• ಸ್ಥಳದಲ್ಲೇ ಚಿತ್ರ ರಚನೆ ಮಾಡುವ ಕಲಾವಿದರು ದಿನಾಂಕ 21-01-2024 ರಂದು ಬೆಳಗ್ಗೆ 9:00 ಗಂಟೆಗೆ ಹಾಜರಿರಬೇಕು.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ಮಾಧ್ಯಮ ಘಟಕ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಶೇμÁದ್ರಿ ರಸ್ತೆ, ಬೆಂಗಳೂರು. ದೂರವಾಣಿ: 9480841211.