Belagavi News In Kannada | News Belgaum

ಹುಕ್ಕೇರಿ ತಾಪಂ ಸಭಾಭವನದಲ್ಲಿ ನಡೆದ ಸಾರ್ವಜನಿಕರ ಕುಂದುಕೊರತೆ ಸಭೆ

ಪ್ರಯಾಣಿಕರಿಗೆ ಅಗತ್ಯ ಬಸ್ ಸಂಚಾರದ ವ್ಯವಸ್ಥೆ: ಸಚಿವ ಸತೀಶ್ ಜಾರಕಿಹೊಳಿ

ಹುಕ್ಕೇರಿ: ತಾಲೂಕಿನ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಪ್ರಯಾಣಿಕರಿಗೆ ಅಗತ್ಯ ಬಸ್ ಸೇವೆ ಒದಗಿಸಲು ಪ್ರಯತ್ನಿಸಲಾಗುತ್ತಿದ್ದು ಬರುವ ಫೆಬ್ರುವರಿ ತಿಂಗಳಿನಿAದ ಇನ್ನಷ್ಟು ನೂತನ ಮಾರ್ಗಗಳಲ್ಲಿ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿನ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ನಡೆದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು, ಪ್ರಯಾಣಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಗತ್ಯ ಬಸ್ ಸಂಚಾರ ಒದಗಿಸಲಾಗುವುದು ಎಂದರು.
ಕೋಚರಿ, ರಾಜಕಟ್ಟಿ, ದಡ್ಡಿ, ಮಾರಣಹೋಳ, ಉಳ್ಳಾಗಡ್ಡಿ ಖಾನಾಪುರ, ಯಮಕನಮರಡಿ ಸೇರಿದಂತೆ ಮತ್ತಿತರ ಮಾರ್ಗಗಳಲ್ಲಿ ಬಸ್‌ಗಳ ಸಂಚಾರ ಕೊರತೆಯಿದೆ ಎಂಬ ದೂರುಗಳಿವೆ. ಹಾಗಾಗಿ ಈ ಮಾರ್ಗಗಳಲ್ಲಿ ಸಂಬAಧಿಸಿದ ಡಿಪೋದಿಂದ ಅಗತ್ಯ ಬಸ್‌ಗಳ ಓಡಾಟ ಆರಂಭಿಸಬೇಕು. ಬರುವ ಫೆಬ್ರುವರಿ ತಿಂಗಳಲ್ಲಿ ಪ್ರತಿ ಡಿಪೋಗೆ 10 ಹೊಸ ಬಸ್‌ಗಳು ಬರಲಿದ್ದು ಮತ್ತಷ್ಟು ಬಸ್ ಸೇವೆ ವಿಸ್ತರಿಸಲು ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.
ಜಲಜೀವನ ಮಿಷನ್ (ಜೆಜೆಎಂ) ಅಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳಲ್ಲಿ ತಾಂತ್ರಿಕ ದೋಷವಿದ್ದು ಬಹುತೇಕ ಕಡೆಗಳಲ್ಲಿ ಅವೈಜ್ಞಾನಿಕವಾಗಿ ಕೆಲಸ ಮಾಡಲಾಗಿದೆ ಎಂಬ ಗಂಭೀರ ದೂರುಗಳು ಕೇಳಿ ಬಂದಿವೆ. ಈ ನಿಟ್ಟಿನಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಸಂಬAಧಿಸಿದ ಗುತ್ತಿಗೆದಾರರಿಂದ ನಿಗದಿತ ಅವಧಿಯೊಳಗೆ ಗುಣಮಟ್ಟದ ಕಾಮಗಾರಿ ಮಾಡಿಸಬೇಕು ಎಂದು ಅವರು ಸೂಚಿಸಿದರು.
ಬಳಿಕ ತಾಲೂಕಿನ ವಿವಿಧ ಗ್ರಾಮಗಳ ಜನರ ಅಹವಾಲು, ಕುಂದುಕೊರತೆ ಆಲಿಸಿದ ಸಚಿವರು, ಕೂಡಲೇ ಅವುಗಳನ್ನು ಪರಿಹರಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರೂ ಆದ ತಾಪಂ ಆಡಳಿತಾಧಿಕಾರಿ ಲಕ್ಷö್ಮಣ ಬಬಲಿ, ತಹಶೀಲ್ದಾರ ಮಂಜುಳಾ ನಾಯಕ, ತಾಪಂ ಇಒ ಪ್ರವೀಣ ಕಟ್ಟಿ, ಮ್ಯಾನೇಜರ ಅವಿನಾಶ ಹೊಳೆಪ್ಪಗೋಳ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಮುಖಂಡರಾದ ರವೀಂದ್ರ ಜಿಂಡ್ರಾಳಿ, ಇಲಿಯಾಸ ಇನಾಮದಾರ, ಕಿರಣ ರಜಪೂತ, ದಯಾನಂದ ಪಾಟೀಲ, ವೃಷಭ ಪಾಟೀಲ, ಬಸವರಾಜ ಕೋಳಿ, ಆನಂದ ತವಗಮಠ, ಅಕ್ಷಯ ವೀರಮುಖ ಮತ್ತಿತರರು ಉಪಸ್ಥಿತರಿದ್ದರು.