Belagavi News In Kannada | News Belgaum

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಗೆ ಡಿಕೆಶಿ ಆತ್ಮೀಯ ಸ್ವಾಗತ

ಬೆಂಗಳೂರು: ನಗರದ ಬಿ.ಮಾರೇನಹಳ್ಳಿಯಲ್ಲಿರುವ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ & ಟೆಕ್ನಾಲಜಿ ಸೆಂಟ‌ರ್ ನ ಉದ್ಘಾಟನೆ ಹಾಗೂ ಬೋಯಿಂಗ್ ಸುಕನ್ಯಾ ಲೋಕಾರ್ಪಣೆ ಮಾಡಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವ ಸಲುವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಿದರು.
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನರೇಂದ್ರ ಮೋದಿಯವರನ್ನು ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್  ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಮಯದಲ್ಲಿ ಸಚಿವರಾದ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ರಜನೀಶ್ ಗೋಯಲ್, ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತರಾದ ಬಿ. ದಯಾನಂದ ಸೇರಿದಂತೆ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ಲೋಕಸಭಾ ಸದಸ್ಯರಾದ ಪಿ.ಸಿ. ಮೋಹನ್, ಭಾರತೀಯ ಜನತಾ ಪಾರ್ಟಿ ರಾಜ್ಯಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಹಾಗೂ ಶಾಸಕರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.