Belagavi News In Kannada | News Belgaum

ನದಿಯಲ್ಲಿ ಮುಳುಗಿ ಮೂವರು ಅಯ್ಯಪ್ಪ ಮಾಲಾಧಾರಿಗಳ ಸಾವು

ನಂಜನಗೂಡು: ಪಟ್ಟಣದ ಕಪಿಲ ನದಿಯಲ್ಲಿ ಶುಕ್ರವಾರ ಬೆಳಿಗ್ಗೆ ಸ್ನಾನಕ್ಕೆಂದು ಇಳಿದಿದ್ದ ಅಯ್ಯಪ್ಪ ಮಾಲಾಧಾರಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೃತರನ್ನು ತುಮಕೂರು ಮೂಲದ ಗವಿ ರಂಗ(19), ರಾಕೇಶ್(19) ಹಾಗೂ ಅಪ್ಪು(16) ಎಂದು ಗುರುತಿಸಲಾಗಿದೆ. ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಐವರು ಗುರುವಾರ ತಡರಾತ್ರಿ ಇಲ್ಲಿನ ನಂಜುಂಡೇಶ್ವರನ ದರ್ಶನಕ್ಕೆ ಬಂದಿದ್ದರು. ಶುಕ್ರವಾರ ಬೆಳಿಗ್ಗೆ ಸ್ನಾನಕ್ಕೆಂದು ನದಿಗೆ ಇಳಿದಿದ್ದಾರೆ. ಇಬ್ಬರು ಈಜಿ ಮೇಲೆ ಬಂದಿದ್ದಾರೆ ಎನ್ನಲಾಗಿದೆ.
ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಶಾಸಕ ದರ್ಶನ್‌ ಧ್ರುವನಾರಾಯಣ ಸ್ಥಳಕ್ಕೆ ಭೇಟಿ ನೀಡಿದ್ದರು. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.