Belagavi News In Kannada | News Belgaum

ಜಗದೀಶ್ ಶೆಟ್ಟರ್ ಗೆ ಒಳ್ಳೆಯದಾಗಲಿ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಯಾರಿಗೆ ಎಲ್ಲಿ ಇರಬೇಕು ಅನಿಸುತ್ತದೆ ಅವರು ಅಲ್ಲಿಗೆ ಹೋಗುತ್ತಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಬಿಜೆಪಿಯಲ್ಲೇ ಇರಬೇಕೆಂದು ಬಯಸಿದ್ದು, ಅದಕ್ಕೆ ಅವರು ಬಿಜೆಪಿಗೆ ಸೇರಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಗದೀಶ್ ಶೆಟ್ಟರ್ ಬೆನ್ನಲ್ಲೇ ಲಕ್ಷ್ಮಣ ಸವದಿಯವರು ಕೂಡ ಬಿಜೆಪಿ ಸೇರುತ್ತಾರೆ ಎಂಬ ವಿಚಾರಕ್ಕೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಟಿಕೆಟ್ ಸಿಗದ ಕಾರಣ ಶೆಟ್ಟರ್‌ ಕಾಂಗ್ರೆಸ್‌ ಗೆ ಬಂದರು.

ಆದರೆ ಯಾಕೆ ಬಿಜೆಪಿಗೆ ಹೋಗಿದ್ದಾರೆ ಅಂತ ಗೊತ್ತಿಲ್ಲ, ಅವರನ್ನೇ ಕೇಳಬೇಕೆಂದು ತಿಳಿಸಿದರು.ಬೆಳಗಾವಿ: ಯಾರಿಗೆ ಎಲ್ಲಿ ಇರಬೇಕು ಅನಿಸುತ್ತದೆ ಅವರು ಅಲ್ಲಿಗೆ ಹೋಗುತ್ತಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಬಿಜೆಪಿಯಲ್ಲೇ ಇರಬೇಕೆಂದು ಬಯಸಿದ್ದು, ಅದಕ್ಕೆ ಅವರು ಬಿಜೆಪಿಗೆ ಸೇರಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಗದೀಶ್ ಶೆಟ್ಟರ್ ಬೆನ್ನಲ್ಲೇ ಲಕ್ಷ್ಮಣ ಸವದಿಯವರು ಕೂಡ ಬಿಜೆಪಿ ಸೇರುತ್ತಾರೆ ಎಂಬ ವಿಚಾರಕ್ಕೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಟಿಕೆಟ್ ಸಿಗದ ಕಾರಣ ಶೆಟ್ಟರ್‌ ಕಾಂಗ್ರೆಸ್‌ ಗೆ ಬಂದರು. ಆದರೆ ಯಾಕೆ ಬಿಜೆಪಿಗೆ ಹೋಗಿದ್ದಾರೆ ಅಂತ ಗೊತ್ತಿಲ್ಲ, ಅವರನ್ನೇ ಕೇಳಬೇಕೆಂದು ತಿಳಿಸಿದರು.