Belagavi News In Kannada | News Belgaum

ಶೆಟ್ಟರ್‌ಗೆ ನಾವು ಅನ್ಯಾಯ, ಅಪಮಾನ ಮಾಡಿಲ್ಲ: ಸಿಎಂ ಸಿದ್ದರಾಮಯ್ಯ

ಮಡಿಕೇರಿ: ಕಾಂಗ್ರೆಸ್ ಪಕ್ಷದಲ್ಲಿ ಜಗದೀಶ್ ಶೆಟ್ಟರಿಗೆ ಯಾವುದೇ ಅನ್ಯಾಯ ಆಗಿಲ್ಲ. ಅವಮಾನವೂ ಆಗಿಲ್ಲ. ಅವರು ಯಾಕೆ ಪಕ್ಷ ಬಿಟ್ಟರೋ ಗೊತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗುರುವಾರ ವಿರಾಜಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಗದೀಶ್ ಶೆಟ್ಟರ್ ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು., ಬಿಜೆಪಿ ಟಿಕೆಟ್ ಕೊಡದೇ ಅವಮಾನ ಮಾಡಿದ್ದಾರೆ ಎಂದು ಹೇಳಿ ಸೇರಿದರು.

ನಾವು ಅವರಿಗೆ ಟಿಕೆಟ್ ಕೊಟ್ಟರೂ ವಿಧಾನಸಭಾ ಚುನಾವಣೆಯಲ್ಲಿ ಸೋತರು. ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದರು. ಅವರು ಪುನ: ಬಿಜೆಪಿಗೆ ಸೇರ್ಪಡೆಯಾಗಿರುವ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಬಳಿ ಬಿಜೆಪಿಯಲ್ಲಿ ಅವಮಾನವಾಗಿದ್ದು ಪುನ: ವಾಪಸ್ಸು ಹೋಗುವುದಿಲ್ಲ ಎಂದಿದ್ದರು. ನನ್ನನ್ನು ಅವರು 10 ದಿನಗಳ ಹಿಂದೆ ಸಭೆಯೊಂದರಲ್ಲಿ ಭೇಟಿ ಮಾಡಿದ್ದರು. ನಂತರ ನನಗೆ ಅವರು ಸಿಕ್ಕಿಲ್ಲ ಎಂದರು.

ಒಂಬತ್ತು ತಿಂಗಳ ಹಿಂದೆ ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರಿದ್ದ ಜಗದೀಶ್‌ ಶೆಟ್ಟರ್‌ ಅವರು ಗುರುವಾರ ದಿಲ್ಲಿಯಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲಿ ಕಮಲ ಪಾಳಯವನ್ನು ಮತ್ತೆ ಸೇರಿದರು. ಇಂಡಿಯಾ ಒಕ್ಕೂಟದಲ್ಲಿ ಬಿರುಕು ಮೂಡಿರುವ ಬಗ್ಗೆ ಮಾತನಾಡಿ, ಅದನ್ನು ಇಂಡಿಯಾ ಒಕ್ಕೂಟದ ಎಲ್ಲಾ ಪಕ್ಷದ ವರಿಷ್ಠರು ಸರಿಪಡಿಸುತ್ತಾರೆ ಎಂದರು.//////