Belagavi News In Kannada | News Belgaum

ಬೆಳಗಾವಿ ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸಲು ರಾಷ್ಟ್ರೀಯ ಹೆದ್ದಾರಿ-48 ಗಾಂಧಿ ನಗರದಿಂದ ರಾಣಿ ಚನ್ನಮ್ಮಾ ವೃತ್ತದವರೆಗೆ

 

ಶ್ರೀ ಸತೀಶ್ ಲ. ಜಾರಕಿಹೊಳಿ
ಲೋಕೋಪಯೋಗಿ ಇಲಾಖೆ ಸಚಿವರು
ಹಾಗೂ
ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು
ಇವರ ಭಾಷಣ

26 ಜನವರಿ 2024

ಆದರಣೀಯರೇ, ಬೆಳಗಾವಿ ಜಿಲ್ಲೆಯ ಸಮಸ್ತ ನಾಗರೀಕರೇ,
ಭಾರತ ರಾಷ್ಟçವು ಗಣರಾಜ್ಯವೆಂದು 1950ರ ಜನವರಿ 26ರಂದು ಘೋಷಿಸಿಕೊಂಡಿತು. ಸ್ವಾತಂತ್ರö್ಯದ ಅಮೃತ ಘಳಿಗೆಯಲ್ಲಿ ಇಂದು ಆಚರಿಸಲಾಗುತ್ತಿರುವ 75ನೇ ಗಣರಾಜೋತ್ಸವದ ಶುಭಾಶಯಗಳನ್ನು ತಿಳಿಸಲು ನನಗೆ ಅತ್ಯಂತ ಸಂತೋಷವೆನಿಸುತ್ತದೆ.
ಇಂದಿನ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಭಾಗಿಯಾಗಿರುವ ನಾಡಿನ ಎಲ್ಲ ಹಿರಿಯರಿಗೆೆ, ಕವಿ-ಸಾಹಿತಿಗಳಿಗೆ, ಚಿಂತಕರು, ಜಿಲ್ಲೆಯ ಶಾಸಕ ಮಿತ್ರರು, ಸಂಸದರು, ಹಾಗೂ ಎಲ್ಲ ಜನಪ್ರತಿನಿಧಿಗಳು, ನಾಗರಿಕ ಬಂಧುಗಳು ಮತ್ತು ಮಾಧ್ಯಮ ಸ್ನೇಹಿತರಿಗೆ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಬೆಳಗಾವಿ ಜಿಲ್ಲೆ ಚಾರಿತ್ರಿಕವಾಗಿ ತನ್ನದೇ ಆದ ಮಹತ್ವವನ್ನು ದಾಖಲಿಸಿದೆ. ರಾಷ್ಟ್ರ ಭಕ್ತಿಯು ಜಿಲ್ಲೆಯ ಜನತೆಯ ನರನಾಡಿಗಳಲ್ಲಿ ಹರಿದಾಡುತ್ತಿದೆ. ಈ ನೆಲವು ಗಾಂಧೀಜಿ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಮಹಾತ್ಮರು ನಡೆದಾಡಿದ ನೆಲವಾಗಿದೆ. ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣರು ಸ್ವಾಭಿಮಾನಕ್ಕಾಗಿ ಆತ್ಮಸಮರ್ಪಣೆ ಮಾಡಿಕೊಂಡ ನೆಲ. ಶರಣರು ನಡೆದಾಡಿದ ತಪೋಭೂಮಿಯಿದು.
ಭಾರತ ರಾಷ್ಟçವು ಗಣರಾಜ್ಯವೆಂದು 1950ರ ಜನವರಿ 26ರಂದು ಘೋಷಿಸಿಕೊಂಡಿತು. ಈ ಗಣರಾಜ್ಯ ದಿನವು ದೇಶದ ನಾಗರಿಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದೆ. ನಮ್ಮ ಸಂವಿಧಾನವನ್ನು ಒಪ್ಪಿಕೊಂಡ ದಿನವಿದು. ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ದಿನವಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಅವರಂಥಹ ಮಹಾನ್ ಮಾನವತಾವಾದಿಗಳು ರಾಷ್ಟçದ ಅಭಿವೃದ್ಧಿಯ ಬಗೆಗೆ ಹಗಲಿರುಳೆನ್ನದೆ ಚಿಂತಿಸಿ ರಚಿಸಿದ “ಸಂವಿಧಾನ”ವು ಭವ್ಯಭಾರತಕ್ಕೆ ದಾರಿದೀಪವಾಗಿದೆ.
ಡಾ. ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ, ಚಿಂತನೆಯ ಫಲವಾಗಿ ನಾವಿಂದು ಜಗತ್ತಿಗೆ ಮಾದರಿಯಾದ ಸಂವಿಧಾನದ ವಾರಸುದಾರರಾಗಿದ್ದೇವೆ. ಪರಕೀಯರ ಆಡಳಿತದಲ್ಲಿದ್ದ ಭಾರತವು ಕೇವಲ 75 ವರ್ಷಗಳಲ್ಲಿ ಜಗತ್ತಿನ ಅತ್ಯಂತ ಬಲಿಷ್ಠ ಪ್ರಜಾತಂತ್ರ ರಾಷ್ಟçವಾಗಿ ಹೊರಹೊಮ್ಮಲು ಈ ಸಂವಿಧಾನವೇ ಬುನಾದಿಯಾಗಿದೆ ಎಂದರೆ ತಪ್ಪಾಗಲಾರದು.
ಸಾಮಾಜಿಕ ನ್ಯಾಯ, ಸಮಾನತೆ, ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳು ನಮ್ಮ ಸಂವಿಧಾನ ನಮಗೆ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆಗಳಾಗಿವೆ.
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಮ್ಮ ಸರ್ಕಾರವು ಜನರಿಗೆ ನೀಡಿದ ಭರವಸೆಯಂತೆ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಈ ಐದೂ ಗ್ಯಾರಂಟಿ ಯೋಜನೆಗಳನ್ನು ಅತ್ಯಂತ ಕಡಿಮೆ ಅವಧಿಯಲ್ಲಿ ಅನುಷ್ಠಾನಗೊಳಿಸುವ ಮೂಲಕ “ನುಡಿದಂತೆ ನಡೆದಿದೆ”.
ಸಂವಿಧಾನ ಜಾರಿಗೆ ಬಂದ ಈ ಅಮೃತಗಳಿಗೆಯಲ್ಲಿ ನಮ್ಮ ಭಾರತ ಸಂವಿಧಾನದ ಮೌಲ್ಯಗಳು ಮತ್ತು ಆಶಯಗಳ ಕುರಿತು ನಾಗರಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಗಣರಾಜ್ಯೋತ್ಸವ ದಿನವಾದ ಇಂದಿನಿAದ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ “ಸಂವಿಧಾನ ಜಾಗೃತಿ ಜಾಥಾ”ವನ್ನು ಸರಕಾರ ಹಮ್ಮಿಕೊಂಡಿದೆ.
ಸAವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರವು ಬೆಳಗಾವಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳಿಗೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿನ ಜನರಲ್ಲಿ ಸಂವಿಧಾನದ ಕುರಿತು ಜಾಗೃತಿ ಮೂಡಿಸಲಿದೆ.
ಸಂವಿಧಾನ ದಿನಾಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥಾ” ರಾಷ್ಟ್ರೀಯ ಮಟ್ಟದ ಸಮಾವೇಶ 25ನೇ ಫೆಬ್ರುವರಿ 2024 ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ಗಣರಾಜ್ಯೋತ್ಸವದ ಹೊಸ್ತಿಲಿನಲ್ಲಿ ಜನವರಿ 18, 2024 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಇಡೀ ಜಗತ್ತಿಗೆ ಸಾಂಸ್ಕೃತಿಕ, ಸಾಮಾಜಿಕ ಮತ್ತು ರಾಜಕೀಯ ಚಿಂತನೆಗಳಿಗೆ ಹೊಸ ದಿಕ್ಕು ನೀಡಿದ ವಚನ ಚಳವಳಿಯ ನಾಯಕ ಬಸವಣ್ಣನವರನ್ನು ನಮ್ಮ ಸರ್ಕಾರವು “ಕರ್ನಾಟಕದ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಲಾಗಿದೆ.
ಇದಲ್ಲದೇ ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ಎಂದು ಗುರುತಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ಗೌರವಾರ್ಥ ಕಿತ್ತೂರು ತಾಲ್ಲೂಕನ್ನು “ಚನ್ನಮ್ಮನ ಕಿತ್ತೂರು” ಎಂದು ಮರು ನಾಮಕರಣ ಕೂಡ ಮಾಡಲಾಗಿದೆ.
ಇತ್ತೀಚೆಗೆ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವದ ಸಂದರ್ಭದಲ್ಲಿ 257 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿ ಶಿಲ್ಪವನವನ್ನು ಮಾನ್ಯ ಮುಖ್ಯಮಂತ್ರಿಗಳು ಉದ್ಘಾಟಿಸಿದ್ದಾರೆ.
ಬೆಳಗಾವಿ ನಗರ ಸೇರಿದಂತೆ ನಮ್ಮ ಜಿಲ್ಲೆಯಲ್ಲಿ ಕೈಗೊಂಡ ಕೆಲವು ಅಭಿವೃದ್ಧಿ ಕೆಲಸಗಳನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ.

ಬೆಳಗಾವಿ ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸಲು ರಾಷ್ಟ್ರೀಯ ಹೆದ್ದಾರಿ-48 ಗಾಂಧಿ ನಗರದಿಂದ ರಾಣಿ ಚನ್ನಮ್ಮಾ ವೃತ್ತದವರೆಗೆ ಅಂದಾಜು 350 ಕೋಟಿ ರೂಪಾಯಿ ವೆಚ್ಚದಲ್ಲಿ ಫ್ಲೈ ಓವರ್ ನಿರ್ಮಿಸಲು ಯೋಜಿಸಲಾಗಿದೆ.
ಪ್ರಸ್ತುತ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿರುವ ವಿವಿಧ ಇಲಾಖೆಗಳ ಕಟ್ಟಡಗಳನ್ನು ತೆರವುಗೊಳಿಸಿ ಒಂದು ಸುಸಜ್ಜಿತವಾದ ಜಿಲ್ಲಾ ಕಚೇರಿಗಳ ಸಂಕೀರ್ಣ ಕಟ್ಟಡವನ್ನು ಅಂದಾಜು 200 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಕೊಳ್ಳಲಾಗುತ್ತಿದೆ.

ಹುದಲಿ ಗ್ರಾಮದ ಬೈಪಾಸ್ ರಸ್ತೆಯಲ್ಲಿ ಇರುವ ಮ್ಯಾನುವಲ್ ರೈಲ್ವೆ ಗೇಟ್‌ನ್ನು, ರೈಲ್ವೆ ಮೇಲ್ಸೇತುವೆಯನ್ನಾಗಿ ಪರಿವರ್ತಿಸಲು ರೂ.35 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗುವುದು.

ನಿಲಜಿಯಿಂದ ಸಾಂಬ್ರಾ ವಿಮಾನ ನಿಲ್ದಾಣವರೆಗೆ ದ್ವಿಪಥದಿಂದ ಚತುಷ್ಪಥ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ರೂ. 58 ಕೋಟಿಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಶೀಘ್ರವಾಗಿ ಅನುಮೋದನೆ ಪಡೆದುಕೊಂಡು ಕಾರ್ಯಗತಗೊಳಿಸಲಾಗುವುದು.

ಬೆಳಗಾವಿ ನಗದರಲ್ಲಿ ಒಂದು ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲು ವಿಸ್ತೃತವಾದ ಯೋಜನೆಯನ್ನು ರೂ.60 ಕೋಟಿ ಅಂದಾಜು ಮೊತ್ತದ ಯೋಜನೆ ತಯಾರಿಸಲಾಗಿದ್ದು, ಪ್ರಸಕ್ತ 2023-24ನೇ ಸಾಲಿನಲ್ಲಿ ರೂ.10 ಕೋಟಿಗಳಲ್ಲಿ ಕಾಮಗಾರಿಯನ್ನು ಕೈಗೊಂಡು ಮುಂಬರುವ ಸಾಲಿನಲ್ಲಿ ಹಂತ ಹಂತವಾಗಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ ನಿರ್ಮಿಸಲಾಗುವುದು.

“ಹಸಿವುಮುಕ್ತ ಕರ್ನಾಟಕ” ಇದು ನಮ್ಮ ಸರ್ಕಾರದ ಮುಖ್ಯ ಧ್ಯೇಯವಾಗಿದೆ. ಇದಕ್ಕಾಗಿ ರಾಜ್ಯ ಸರಕಾರವು ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ “ಅನ್ನಭಾಗ್ಯ” ಯೋಜನೆಯನ್ನು ಜಾರಿಗೊಳಿಸಿದೆ.
ಈ ಯೋಜನೆಯಲ್ಲಿ ಕುಟುಂಬದ ಪ್ರತಿ ಸದಸ್ಯರಿಗೆ ಹತ್ತು ಕೆ.ಜಿ. ಅಕ್ಕಿ ನೀಡಲು ನಿರ್ಧರಿಸಲಾಗಿತ್ತು. ಆದರೆ ಕಾರಣಾಂತರದಿAದ ಐದು ಕೆ.ಜಿ. ಅಕ್ಕಿ ಹಾಗೂ ಅದರೊಂದಿಗೆ ಜುಲೈ 2023 ರಿಂದ ಐದು ಕೆ.ಜಿ. ಅಕ್ಕಿ ಮೊತ್ತಕ್ಕೆ ಸಮನಾಗಿ ಪ್ರತಿ ಸದಸ್ಯರಿಗೆ ತಲಾ 170 ರೂಪಾಯಿಗಳನ್ನು ಡಿಬಿಟಿ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ.
ಕಳೆದ ಜುಲೈ ತಿಂಗಳಿನಿಂದ ಡಿಸೆಂಬರ್ 2023 ರವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ 321 ಕೋಟಿ ರೂಪಾಯಿ ಮೊತ್ತವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ “ಗೃಹಲಕ್ಷ್ಮೀ” ಗ್ಯಾರಂಟಿ ಯೋಜನೆಯಡಿ 11.87 ಲಕ್ಷ ಫಲಾನುಭವಿಗಳ ನೋಂದಣಿಯ ಗುರಿ ನಿಗದಿಪಡಿಸಿದ್ದು, ಇಲ್ಲಿಯವರೆಗೆ 10.58 ಲಕ್ಷ ಫಲಾನುಭವಿಗಳು ಈ ಯೋಜನೆಯಡಿ ನೋಂದಣಿಯಾಗಿರುತ್ತಾರೆ.
ಅದರನ್ವಯ ಅಗಸ್ಟ್-2023ರ ತಿಂಗಳಲ್ಲಿ 9.22 ಲಕ್ಷ ಫಲಾನುಭವಿಗಳಿಗೆ ರೂ. 2,000 ರಂತೆ ಒಟ್ಟು ರೂ. 184.47 ಕೋಟಿ ಜಮೆಯಾಗಿರುತ್ತದೆ. ಸೆಪ್ಟೆಂಬರ್ 2023 ರ ತಿಂಗಳಲ್ಲಿ 9.20 ಲಕ್ಷ ಫಲಾನುಭವಿಗಳ ಖಾತೆಗೆ ಒಟ್ಟು ರೂ. 184.11 ಕೋಟಿ ಹಣ ಬ್ಯಾಂಕ್ ಖಾತೆಗಳಿಗೆ ಜಮೆಯಾಗಿರುತ್ತದೆ. ಅಕ್ಟೋಬರ್-2023 ರಿಂದ ಬೆಂಗಳೂರಿನ ಪ್ರಧಾನ ಕಛೇರಿ ಹಂತದಲ್ಲಿ ಬಿಲ್ಲುಗಳನ್ನು ಸಿದ್ಧಪಡಿಸಲಾಗುತ್ತಿದೆ.
ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ “ಶಕ್ತಿ” ಗ್ಯಾರಂಟಿ ಯೋಜನೆಯು ಜಾರಿಗೊಂಡಿರುವ ಜೂನ್ 11 ರಿಂದ ಜನವರಿ 18, 2024 ರವರೆಗೆ ಸಾರಿಗೆ ಸಂಸ್ಥೆಯ ಬೆಳಗಾವಿ ಜಿಲ್ಲೆಯ ಮೂರು ವಿಭಾಗಗಳ ಅಡಿಯಲ್ಲಿ ಒಟ್ಟು 1058 ಲಕ್ಷ ಮಹಿಳೆಯರು ಪ್ರಯಾಣಿಸಿದ್ದು, ಒಟ್ಟಾರೆ ಉಚಿತ ಪ್ರಯಾಣದ ಮೊತ್ತ 246 ಕೋಟಿ ರೂಪಾಯಿ ಆಗಿರುತ್ತದೆ.
ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ “ಗೃಹಜ್ಯೋತಿ” ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 10.14 ಲಕ್ಷ ಸಂಖ್ಯೆಯ ಗೃಹ ವಿದ್ಯುತ್ ಬಳಕೆದಾರರಿದ್ದು, ಸದರಿ ಯೋಜನೆಯಲ್ಲಿ ಒಟ್ಟು 9.55 ಲಕ್ಷ ಬಳಕೆದಾರರು ನೋಂದಾಯಿಸಿರುತ್ತಾರೆ.
ಸರಾಸರಿ ಬಳಕೆಯ ಆಧಾರದ ಮೇಲೆ ಮಾಸಿಕ 200 ಯುನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ನೋಂದಾಯಿತ ಫಲಾನುಭವಿಗಳಿಗೆ “ಗೃಹಜ್ಯೋತಿ” ಯೋಜನೆಯಡಿ ಮಾಸಿಕ ಸರಾಸರಿ 38 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ.

ಪದವೀಧರ ಹಾಗೂ ಡಿಪ್ಲೋಮಾ ಪೂರ್ಣಗೊಳಿಸಿರುವ ನಿರುದ್ಯೋಗಿಗಳಿಗೆ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತೆ ಪ್ರತಿ ತಿಂಗಳು ಕ್ರಮವಾಗಿ 3 ಸಾವಿರ ಹಾಗೂ 1500 ರೂಪಾಯಿ ನಿರುದ್ಯೋಗ ಭತ್ಯೆ ನೀಡುವ “ಯುವನಿಧಿ” ಗ್ಯಾರಂಟಿ ಯೋಜನೆಗೆ ಜ.12 ರಂದು ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ “ಯುವನಿಧಿ” ಯೋಜನೆಯಡಿ ಜನವರಿ 19 ರವರೆಗೆ ಒಟ್ಟಾರೆ 9688 ಜನರು ನೋಂದಣಿ ಮಾಡಿಸಿಕೊಂಡಿರುತ್ತಾರೆ. ಇದು ರಾಜ್ಯದಲ್ಲಿಯೇ ಅತೀ ಹೆಚ್ಚು ಜನರ ನೋಂದಣಿಯಾಗಿದ್ದು, ಇವರೆಲ್ಲರಿಗೂ ಜನವರಿ ಮಾಹೆಯಿಂದ ಭತ್ಯೆಯನ್ನು ನೀಡಲಾಗುವುದು.
ಬೆಳಗಾವಿ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ 3.67 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದ್ದು, ಇದುವರೆಗೆ 3.38 ಲಕ್ಷ ಹೆಕ್ಟೇರ್ ಅಂದರೆ ಶೇ.92ರಷ್ಟು ಬಿತ್ತನೆಯಾಗಿದೆ. 84 ಸಾವಿರ ರೈತರಿಗೆ ಉತ್ತಮ ಗುಣಮಟ್ಟದ 19,791 ಕ್ವಿಂಟಲ್ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ಪೂರೈಸಲಾಗಿದೆ.

ಜಿಲ್ಲೆಯಲ್ಲಿ 15 ತಾಲೂಕಿನಲ್ಲಿ 24 ವಾರಗಳಿಗೆ ಸಾಕಾಗುವಷ್ಟು 15 ಲಕ್ಷ ಟನ್ ಮೇವಿನ ಲಭ್ಯತೆ ಇದೆ. “ಪಶು ಸಂಜೀವಿನಿ’’ ವಾಹನದ ಮೂಲಕ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ತುರ್ತು ಸಂದರ್ಭದಲ್ಲಿ ಶಸ್ತçಚಿಕಿತ್ಸೆಯನ್ನು ಒದಗಿಸಲು ಜಿಲ್ಲೆಯಲ್ಲಿ ಒಟ್ಟು 18 (ಸಹಾಯವಾಣಿ ಸಂಖ್ಯೆ-1962) ವಾಹನಗಳ ಮೂಲಕ ತಕ್ಷಣದ ಸೇವೆಯನ್ನು ಒದಗಿಸಲಾಗುತ್ತಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜನಿಯರಿಂಗ್ ವಿಭಾಗದಿಂದ ಜಿಲ್ಲೆಯಲ್ಲಿ ಬೆಳಗಾವಿ ನಗರದ ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ ಸೇರಿ 19 ಸರ್ಕಾರಿ ಆರೋಗ್ಯ ಸಂಸ್ಥೆಗಳ ಕಟ್ಟಡ ಕಾಮಗಾರಿಗಳು ಅಂದಾಜು 332 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ.
ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನಾರೋಗ್ಯ- ಆರೋಗ್ಯ ಕರ್ನಾಟಕ ಯೋಜನೆಯಡಿ ಇಲ್ಲಿಯವರೆಗೆ ಒಟ್ಟು 3.72 ಲಕ್ಷ ಫಲಾನುಭವಿಗಳಿಗೆ 350 ಕೋಟಿ ರೂಪಾಯಿ ವಿನಿಯೋಗಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಪ್ರಸ್ತುತ ತುಬಚಿ-ಬಬಲೇಶ್ವರ, ಬಸವೇಶ್ವರ(ಕೆಂಪವಾಡ), ವೆಂಕಟೇಶ್ವರ, ಗೊಡಚಿನಮಲ್ಕಿ, ಚಚಡಿ, ಮುರಗೋಡ, ಶ್ರೀ ರಾಮೇಶ್ವರ, ವೀರಭದ್ರೇಶ್ವರ, ಸಾಲಾಪುರ ಹೀಗೆ ಒಟ್ಟು 9 ಏತ ನೀರಾವರಿ ಯೋಜನೆಗಳು ಚಾಲ್ತಿಯಲ್ಲಿರುತ್ತವೆ.
ಈ 9 ನೀರಾವರಿ ಯೋಜನೆಗಳಿಂದ ಬೆಳಗಾವಿ ಜಿಲ್ಲೆಯ 6 ತಾಲೂಕುಗಳ 80,162 ಹೆಕ್ಟೇರ್, ಬಾಗಲಕೋಟೆ ಜಿಲ್ಲೆಯ ಮೂರು ತಾಲೂಕುಗಳ 13,869 ಹೆಕ್ಟೇರ್ ಹಾಗೂ ಬಿಜಾಪೂರ ಜಿಲ್ಲೆಯ 44,375 ಹೆಕ್ಟೇರ್ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಬಹುದಾಗಿದೆ.
ಈ ಪೈಕಿ ತುಬಚಿ ಬಬಲೇಶ್ವರದ Phase-I ಮತ್ತು Phase-II, ಚಚಡಿ-ಮುರಗೋಡ ಹಾಗೂ ಗೊಡಚಿನಮಲ್ಕಿ ಏತ ನೀರಾವರಿ ಯೋಜನೆಗಳ ಹೆಡವರ್ಕ ಕಾಮಗಾರಿಗಳು ಪೂರ್ಣಗೊಂಡಿವೆ. ಈ ಏತ ನೀರಾವರಿ ಯೋಜನೆಗಳಿಗೆ ಇದುವರೆಗೆ ಐದು ಸಾವಿರ ಕೋಟಿ ರೂಪಾಯಿ ವೆಚ್ಚವಾಗಿರುತ್ತದೆ.
***********

‘ಸರ್ವಜನಾಂಗದ ಶಾಂತಿಯ ತೋಟ’ವೆಂದು ರಾಷ್ಟ್ರಕವಿ ಕುವೆಂಪು ಅವರು ಕರ್ನಾಟಕವನ್ನು ವ್ಯಾಖ್ಯಾನಿಸಿದ್ದಾರೆ. ಇಂತಹ ತೋಟದಲ್ಲಿ ನಾವೆಲ್ಲಾ ಸಾಮರಸ್ಯದಿಂದ ಬೆಳೆದುನಿಂತ ಫಲಪುಷ್ಪಗಳು. ಈ ನೆಲದ ಮಣ್ಣಿನ ಗುಣ, ಗಣತಂತ್ರ ವ್ಯವಸ್ಥೆಯ ಮತ್ತು ಸಂವಿಧಾನದ ಮೂಲ ಆಶಯಗಳನ್ನಿಟ್ಟುಕೊಂಡು ಎಲ್ಲರೂ ಸಹಬಾಳ್ವೆಯಿಂದ ಬದುಕೋಣ. ಇದು ನನ್ನ ಗಣರಾಜ್ಯೋತ್ಸವದ ಸಂದೇಶವಾಗಿದೆ. ಮತ್ತೊಮ್ಮೆ ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು.
ಜೈಹಿಂದ್
ಜಯಹೇ ಕರ್ನಾಟಕ ಮಾತೆ