Belagavi News In Kannada | News Belgaum

ರಸ್ತೆ ದಾಟುತ್ತಿದ್ದ ವೇಳೆ ಡಿಕ್ಕಿ ಹೊಡೆದ ಕಾರು: ಹುಲಿ ಸ್ಥಳದಲ್ಲೇ ಸಾವು

ಮೈಸೂರು: ವೇಗವಾಗಿ ಸಾಗುತ್ತಿದ್ದ ಕಾರೊಂದು ರಸ್ತೆ ದಾಟುತ್ತಿದ್ದ ಹುಲಿಗೆ ಡಿಕ್ಕಿ ಹೊಡೆದು ಹುಲಿ ಸ್ಥಳದಲ್ಲೇ ಮೃತಪಟ್ಟಿದೆ. ಮೈಸೂರು-ನಂಜನಗೂಡು ರಸ್ತೆಯ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಘಟನೆ ನಡೆದಿರುವುದು ಭಾರಿ ಆತಂಕಕ್ಕೆ ಕಾರಣವಾಗಿದೆ.
ರಾಷ್ಟ್ರೀಯ ಪ್ರಾಣಿಯಾಗಿರುವ ಹುಲಿಯ ಸಾವು ಒಂದು ಕಡೆ ಆತಂಕಕ್ಕೆ ಕಾರಣವಾಗಿದ್ದರೆ, ಇನ್ನೊಂದು ಕಡೆ ಮಂಡಕಳ್ಳಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಹುಲಿಗಳ ಸಂಚಾರವೂ ಆತಂಕ ಮೂಡಿಸಿದೆ. ಸುಮಾರು ಒಂದೂವರೆ ವರ್ಷದ ಗಂಡು ಹುಲಿ ಇದಾಗಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಹುಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ./////