Belagavi News In Kannada | News Belgaum

ವಾಹನ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿನಿ ಸಾವು

ಬೆಳಗಾವಿ: ಕಾಲೇಜು ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಟಂಟಂ ವಾಹನ ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ  ಮೃತಪಟ್ಟಿರುವ ಘಟನೆ ಜಿಲ್ಲೆಯ ಚನ್ನಮ್ಮನ ಕಿತ್ತೂರು ಪಟ್ಟಣದಲ್ಲಿ ನಡೆದಿದೆ.

ಕಿತ್ತೂರಿನ ಸರ್ಕಾರಿ ಪದವಿ ಕಾಲೇಜಿನಲ್ಲಿ 3ನೇ ಸೆಮಿಸ್ಟರ್‌ ಓದುತ್ತಿದ್ದ ಕಿತ್ತೂರು ‌ತಾಲೂಕಿನ ಉಗರಖೋಡ ಗ್ರಾಮದ ಕಾವೇರಿ ಕಾಜಗಾರ (21) ಮೃತ ದುರ್ದೈವಿ. ಇವಳು ಎಂದಿನಂತೆ ಬುಧವಾರ ಕೂಡ ಕಾಲೇಜು ಮುಗಿಸಿಕೊಂಡು ವಿದ್ಯಾರ್ಥಿನಿ ಮನೆ ಕಡೆಗೆ ಹೊರಟಿದ್ದರು. ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದಾಗ ಏಕಾಏಕಿ ಬಂದ ಟಂಟಂ ವಾಹನ ವಿದ್ಯಾರ್ಥಿನಿ ಮೇಲೆಯೇ ಹರಿದಿ ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಜನರನ್ನು ಚದುರಿಸಿ ಆರೋಪಿ ವಾಹನ ಚಾಲಕ ದೇವಗಾಂವ್ ಗ್ರಾಮದ ಅನಿಲ್ ಚಿವುಟಗುಂಡಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಕಿತ್ತೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ./////