Belagavi News In Kannada | News Belgaum

ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನನ್ನ ಜೊತೆಗೆ ಯಾರೆಲ್ಲ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ರೋ, ಅವರೆಲ್ಲ ಮತ್ತೆ ಬಿಜೆಪಿ ಸೇರಲಿದ್ದಾರೆ ಎಂಬುದಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ.
ಇಂದು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಜೊತೆಗೆ ಕಾಂಗ್ರೆಸ್ ಸೇರಿದಂತ ಹಲವರು ನನ್ನ ಸಂಪರ್ಕದಲ್ಲೇ ಇದ್ದಾರೆ. ಅವರೆಲ್ಲ ಕಾಂಗ್ರೆಸ್ ಪಕ್ಷವನ್ನು ತೊರೆದು, ಮರಳಿ ಬಿಜೆಪಿ ಸೇರಲಿದ್ದಾರೆ ಎಂದರು.
ಆದಷ್ಟು ಶೀಘ್ರದಲ್ಲೇ ಕಾಂಗ್ರೆಸ್ ಸೇರಿದ್ದಂತ ಬಿಜೆಪಿಗರು ಮರಳಿ ಗೂಡಿಗೆ ಸೇರಲಿದ್ದಾರೆ. ಕಾಂಗ್ರೆಸ್ ನಲ್ಲಿ ಪಕ್ಷದ ವರ್ಚಸ್ಸು ಇಲ್ಲ. ಹೀಗಾಗಿ ಕೈ ತೊರೆದು ಹಲವರು ಬಿಜೆಪಿ ಸೇರುವಂತ ಮನಸ್ಸು ಮಾಡಿದ್ದಾರೆ ಎಂದು ತಿಳಿಸಿದರು./////