Belagavi News In Kannada | News Belgaum

ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ನಾನು ಸ್ಪರ್ಧಿಸುವುದಿಲ್ಲ: ಪ್ರಕಾಶ ಹುಕ್ಕೇರಿ

ಬೆಳಗಾವಿ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುವದಿಲ್ಲ, ಪರಿಷತ್ ಸದಸ್ಯರಾಗಿ ಮುಂದುವರೆಯುತ್ತೇನೆ ಎಂದು ಕಾಂಗ್ರೆಸ್ ನಾಯಕ ಪ್ರಕಾಶ ಹುಕ್ಕೇರಿ ಗುರುವಾರ ಹೇಳಿಕೆ ನೀಡಿದ್ದಾರೆ.
ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧೆ ಕುರಿತು ಸ್ಪಷ್ಟನೆ ನೀಡಿ”ಲೋಕಸಭೆಗೆ ನಾನು ಸ್ಪರ್ಧೆ ಮಾಡುವುದು ಸತ್ಯಕ್ಕೆ ದೂರವಾದ ಸಂಗತಿ. ಹೈಕಮಾಂಡ್ ಹೇಳಿದರೆ ನಾನು ಸ್ಪರ್ಧೆ ಮಾಡಬೇಕಾ? ನಾನೇನು ಫುಟ್ಬಾಲ್ ಚೆಂಡಾ ಎಂದು ಪ್ರಶ್ನಿಸಿದರು.
ಕಳೆದ 2014 ರಲ್ಲಿ ರಾಜ್ಯದಲ್ಲಿ ಸಚಿವನಾಗಿದ್ದೆ. ಆಗ ಹೈಕಮಾಂಡ್ ಸೂಚನೆ ಮೇರೆಗೆ ಸಚಿವ ಸ್ಥಾನ ಬಿಟ್ಟು ಸಂಸದನಾಗಿ ಆಯ್ಕೆಯಾದೆ. ಈಗ ಶಿಕ್ಷಕರ ಮತಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿ ಒಂದು ವರ್ಷದಿಂದ ನಿರಂತರವಾಗಿ ಕೆಲಸ ಮಾಡುತ್ತಿದ್ದೇನೆ.ಲೋಕಸಭೆಗೆ ಸ್ಪರ್ಧೆ ಮಾಡುವುದಿಲ್ಲ. ಪರಿಷತ್ ಸದಸ್ಯರಾಗಿ ಮುಂದುವರಿಯುವೆ ಎಂದರು./////