Belagavi News In Kannada | News Belgaum

ನೈತಿಕ ಪೊಲೀಸ್ ಗಿರಿ: ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ಅನ್ಯಕೋಮಿನ ಯುವಕ, ಯುವತಿಗೆ ಹಿಂದೂ ಸಂಘಟನೆ ಕಾರ್ಯಕರ್ತರು ತೊಂದರೆ ನೀಡಿದ್ದು, ಈ ಕುರಿತು ಪಣಂಬೂರು ಪೊಲೀಸ್ ಠಾಣೆಯಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ದಾಖಲಿಸಲಾಗಿದೆ..

ಮಂಗಳೂರು ಹೊರವಲಯದ ಪಣಂಬೂರು ಬೀಚ್​ಗೆ ಬಂದಿದ್ದ ಕೇರಳದ ಯುವಕ ಹಾಗೂ ಬೆಂಗಳೂರಿನ ಯುವತಿಯನ್ನು ತಡೆದಿರುವ ಹಿಂದೂ ಸಂಘಟನೆ ಕಾರ್ಯಕರ್ತರು ವಿಚಾರಣೆ ನಡೆಸಿ ತೊಂದರೆ ಕೊಟ್ಟಿದ್ದಾರೆ.

ಈ ಕುರಿತು ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪಣಂಬೂರು ಪೊಲೀಸರು ರಾಮ ಸೇನೆಯ ಮೂವರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.