Belagavi News In Kannada | News Belgaum

ನಮ್ಮ ಹಕ್ಕು ಪಡೆಯಲು ಕೇಂದ್ರದ ವಿರುದ್ಧ ಪ್ರತಿಭಟನೆ: ಸಚಿವ ಸತೀಶ್‌ ಜಾರಕಿಹೊಳಿ

ಬೆಂಗಳೂರು: ನಮ್ಮ ಹಕ್ಕು ಪಡೆಯಲು ನಾವು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ, ಕಳೆದ ಹತ್ತು ವರ್ಷಗಳಿಂದ ರಾಜ್ಯಕ್ಕೆ ಬರಬೇಕಾದ ಅನುದಾನ ಬಂದಿಲ್ಲ. ಅದಕ್ಕಾಗಿಯೇ ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದರು..

 

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ, ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿನ ತಾರತಮ್ಯದ ವಿರುದ್ಧದ ಹೋರಾಟ ಮಾಡಿ ಗಮನ ಸೆಳೆಯುತ್ತೇವೆ..

ಅನುದಾನ ಹಂಚಿಕೆಗಾಗಿ ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿ ಸಮಸ್ಯೆ ಬಗ್ಗೆ ತಿಳಿಸಿದರೂ ಇದುವರೆಗೆ ಸ್ಪಂದಿಸಿಲ್ಲ ಎಂದು ತಿಳಿಸಿದರು.