Belagavi News In Kannada | News Belgaum

ಎಚ್.ಡಿ. ದೇವೇಗೌಡ ಆರೋಗ್ಯದಲ್ಲಿ ಏರುಪೇರು..

ಬೆಂಗಳೂ: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್​.ಡಿ. ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಬಂದಿರುವ ಮಾಹಿತಿ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲದ ತಿಳಿದು ಬಂದಿದೆ..

 

ದೇವೇಗೌಡರಿಗೆ ಇಂದು ಬೆಳಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದೆ. ಶ್ವಾಸಕೋಶ ತಜ್ಞ ಡಾ. ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ..