Belagavi News In Kannada | News Belgaum

ರಾಜ್ಯಮಟ್ಟದ ಬೃಹತ್ ಉದ್ಯೋಗಮೇಳ ಯಶಸ್ವಿಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು: ಅಪರ ಜಿಲ್ಲಾಧಿಕಾರಿ ವಿಜಕುಮಾರ ಹೋನಕೇರಿ

ಬೆಳಗಾವಿ,ಫೆ.15: ಸನ್ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ‘ಯುವ ಸಮೃದ್ಧಿ ಸಮ್ಮೇಳನ’ದ ಅಡಿಯಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರುವರಿ 26 ಮತ್ತು 27 ರಂದು ರಾಜ್ಯ ಮಟ್ಟದ “ಬೃಹತ್ ಉದ್ಯೋಗ ಮೇಳ”ವನ್ನು ಆಯೋಜಿಸಲಾಗಿದೆ. ಇದರಲ್ಲಿ ಕಂಪನಿಗಳು, ಹಾಗೂ ಉದ್ಯೋಗಾಕಾಂಕ್ಷಿಗಳು ಪಾಲ್ಗೊಳ್ಳಲು ಸಮಿತಿ ಸಭೆಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಕುಮಾರ ಹೋನಕೇರಿ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ (ಫೆ.15) ನಡೆದ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳ ಅನುμÁ್ಠನದ ಕುರಿತು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಲಾದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಯಶಸ್ವಿಗೆ ಸಂಬಂಧಿಸಿದ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿರುವ ವಿವಿಧ ಪದವಿ ಪೂರ್ವ, ಪದವಿ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಈ ಕುರಿತು ಮಾಹಿತಿ ನೀಡಬೇಕು. ಅದೇ ರೀತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಾದ, ಪಟ್ಟಣ ಪಂಚಾಯಿತಿ, ನಗರ ಸಭೆ, ಪುರ ಸಭೆಗಳಲ್ಲಿ ವಾಹನಗಳ ಮೂಲಕ ಪ್ರಚಾರ ಕೈಗೊಳ್ಳಬೇಕು. ಜಿಲ್ಲಾಡಳತದಿಂದ ಕೂಡ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಲಾಗುವುದು. ಸಾರ್ವಜನಿಕರ ಮುಕ್ತ ಮಾಹಿತಿ ನೀಡುವಂತೆ ವಿವಿಧ ಇಲಾಖೆಗಳು ತಮ್ಮ ಕಚೇರಿಗಳಲ್ಲಿ ಬ್ಯಾನರ್, ಪೆÇೀಸ್ಟರ್ ಗಳನ್ನು ಅಳವಡಿಸಬೇಕು ಎಂದು ತಿಳಿಸಿದರು.
ತಾಲೂಕಾ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ಸಂಪನ್ಮೂಲ ವ್ಯಕ್ತಿಗಳ ಮೂಲಕ ಹೆಚ್ಚಿನ ಪ್ರಚಾರ ಕೈಗೊಳ್ಳಲು ಜಿಲ್ಲಾ ಪಂಚಾಯತ್ ಕ್ರಮ ವಹಿಸಬೇಕು. ಇದರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪಾತ್ರ ಬಹಳಷ್ಟಿದೆ ಆಶಾ ಕಾರ್ಯಕರ್ತೆಯರಿಂದ ಬೃಹತ್ ಉದ್ಯೋಗಮೇಳದ ಮಾಹಿತಿ ನೀಡಬೇಕು ಎಂದರು.
ಮಹಾನಗರ ಪಾಲಿಕೆ ವಾಹನಗಳಲ್ಲಿ ಧ್ವನಿ ವರ್ಧಕಗಳು ಮೂಲಕ ಪ್ರಚಾರ ಕೈಗೊಳ್ಳಬೇಕು. ಜಿಟಿಟಿಸಿ, ಐಟಿಐ ಕಾಲೇಜುಗಳಲ್ಲಿ ಈಗಾಗಲೇ ವ್ಯಾಸಂಗ ಮಾಡಿದ ಹಿಂದಿನ ಸಾಲಿನ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಬೇಕು. ಅತಿ ಹೆಚ್ಚು ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಲು ಸಲಹೆ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೋನಕೇರಿ ತಿಳಿಸಿದರು.
ಪಿಎಂ ವಿಶ್ವಕರ್ಮ ಯೋಜನೆ:
ಪಿಎಂ ವಿಶ್ವಕರ್ಮ ಯೋಜನೆಯಡಿ ಪಾರಂಪರಿಕವಾಗಿ ಕೆಲಸ ಮಾಡುತ್ತಿರುವ ಬಡಿಗ, ಅಕ್ಕಸಾಲಿಗ, ಕಂಬಾರ, ಕುಂಬಾರ ಸೇರಿದಂತೆ ಇತರೆ ವರ್ಗಗಳ ಜನರ ಆರ್ಥಿಕತೆ ಸುಧಾರಣೆಗೆ ಕೇಂದ್ರ ಸರ್ಕಾರದ ಯೋಜನೆಯಡಿ ಸಾಲ ಸೌಲಭ್ಯ ನೀಡಲಾಗುತ್ತಿದೆ.
ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯಕ್ಕಾಗಿ:
ದೇಶದಲ್ಲೇ ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅರ್ಜಿಗಳು ಬಂದಿವೆ. ಅದೇ ರೀತಿಯಲ್ಲಿ ಪಿಎಂ ಸ್ವ-ನಿಧಿ ಯೋಜನೆಯಡಿ ಅರ್ಜಿಗಳನ್ನು ಸಲ್ಲಿಸಲು ತಾಂತ್ರಿಕ ದೋಷಗಳು ಎದುರಾಗುತ್ತಿವೆ. ಕೂಡಲೇ ತಾಂತ್ರಿಕ ದೋಷ ಸರಿಪಡಿಸಲು ಕ್ರಮ ವಹಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿಗಳು ವಿವರಿಸಿದರು.
ಈ ವೇಳೆ ಮಾತನಾಡಿದ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ವ್ಯವಸ್ಥಾಪಕ ಡಾ. ಸಂಜೀವ ತಿಗಣಿ ಅವರು ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಸ್ಥರು ಮೊದಲ ಹಂತದಲ್ಲಿ ಸುಮಾರು 20 ಕೋಟಿ ಸಾಲ ಸೌಲಭ್ಯ ಪಡೆದಿದ್ದಾರೆ. ಈಗಾಗಲೇ ಮರು ಪಾವತಿ ಮಾಡಿದ ವ್ಯಾಪಾರಸ್ಥರಿಗೆ ಹಂತ ಹಂತವಾಗಿ ಹೆಚ್ಚಿನ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದು ಹೇಳಿದರು.
ಪಿಎಂ ಸ್ವ ನಿಧಿಯ ಸಮೃದ್ಧಿ ಯೋಜನೆಯಡಿ ಆರ್ಥಿಕ ಸಬಲೀಕರಣ ಹೊಂದಿದ ಜಿಲ್ಲೆಯ 33 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಮೀಕ್ಷೆ ನಡೆಸಬೇಕು. ಇದಕ್ಕೆ ಸರ್ಕಾರದಿಂದ 5 ಲಕ್ಷ ಅನುದಾನ ನೀಡಲಾಗಿದೆ. ಸಮೀಕ್ಷೆ ಕಾರ್ಯ ಕೈಗೊಳ್ಳಲು ಹೊರಗುತ್ತಿಗೆ ಮೇರೆಗೆ ನೌಕರರನ್ನು ನೇಮಿಸಬೇಕು. ಮಾರ್ಚ್ ಅಂತ್ಯದೊಳಗೆ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ಸೂಚಿಸಿದರು.
ಜಿಲ್ಲಾ ಕೌಶ್ಯಾಭಿವೃದ್ಧಿ ಅಧಿಕಾರಿ ಚಿದಾನಂದ ಬಾಕೆ, ಕಾರ್ಮಿಕ ಇಲಾಖೆ ಅಧಿಕಾರಿ ತರನ್ನಂ ಬೆಂಗಾಲಿ, ಜಗದೀಶ್ ಪೌರಾಯುಕ್ತ ಜಗದೀಶ್ ಹುಲಗೆಜ್ಜೆ, ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕ ವಾಸುದೇವ್ ದೊಡಮನಿ, ಬೆಳಗಾವಿ ಕಾರ್ಮಿಕ ನಿರೀಕ್ಷಕರಾದ ಸಂಜೀವ್ ಭೋಸ್ಲೆ, ಸರಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ಮಹೇಶ್ ಡೊಳ್ಳಿನ, ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.