Belagavi News In Kannada | News Belgaum

‘ಯುವನಿಧಿ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್: ಇದುವರೆಗೆ ‘1,30,785 ಅರ್ಜಿ’ ಸಲ್ಲಿಕೆ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಯುವನಿಧಿ ಯೋಜನೆಯೂ ಒಂದಾಗಿದೆ. ಈ ಯೋಚನೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಇದುವರೆಗೆ 1,30,785 ಮಂದಿ ಅರ್ಜಿ ಸಲ್ಲಿಸಿದ್ದಾರೆ.
ಈ ಕುರಿತಂತೆ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರು ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ದಿನಾಂಕ 26-12-2023ರಂದು ಸಿಎಂ ಸಿದ್ಧರಾಮಯ್ಯ ಉದ್ಘಾಟಿಸಿ, ಚಾಲನೆ ನೀಡಿದ್ದರು ಎಂದಿದ್ದಾರೆ.
ದಿನಾಂಕ 26-12-2023ರಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆ ಆರಂಭಗೊಂಡಿತ್ತು. ಅರ್ಹ ಅಭ್ಯರ್ಥಿಗಳಿಂದ ನೋಂದಣಿಗಾಗಿ ಯುವನಿಧಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಪ್ರತಿದಿನ ಅರ್ಜಿ ಸಲ್ಲಿಸುತ್ತಿದ್ದಾರೆ. ಇದಕ್ಕೆ ಯಾವುದೇ ಅಡಚಣೆ ಇಲ್ಲದಂತೆ ಅಭ್ಯರ್ಥಿಗಳಿಗೆ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.
ದಿನಾಂಕ 16-02-2024ರ ಸಾಯಂಕಾಲ 5.30 ಗಂಟೆಯವರೆಗೆ 1,30,785 ಅರ್ಜಿಗಳು ಸೇವಾಸಿಂಧು ಪೋರ್ಟಲ್ ನಲ್ಲಿ ದಾಖಲಾಗಿರುತ್ತದೆ. ಈ ಮೂಲಕ ಯುವನಿಧಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ ಎಂಬುದಾಗಿ ತಿಳಿಸಿದ್ದಾರೆ. ಅಂದಹಾಗೇ ಯುವನಿಧಿ ಯೋಜನೆ ಅಡಿಯಲ್ಲಿ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು ರೂ.3000 ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ.1,500 ನಿರುದ್ಯೋಗ ಭತ್ಯೆಯನ್ನು ಸರ್ಕಾರದಿಂದ ನೀಡಲಾಗುತ್ತದೆ.//////