Belagavi News In Kannada | News Belgaum

ವಿದ್ಯಾರ್ಥಿಗಳ ಕೈಯಲ್ಲಿ ಕಾರು ಕ್ಲೀನಿಂಗ್: ಶಿಕ್ಷಕರ ದರ್ಬಾರ್‌ ವಿಡಿಯೋ ವೈರಲ್

ವಿಜಯಪುರ: ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸರ್ಕಾರಿ ಶಾಸಕರ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ತಮ್ಮ ಕಾರನ್ನು ವಿದ್ಯಾರ್ಥಿಗಳಿಂದ ಸ್ವಚ್ಛಗೊಳಿಸಿರುವ ಆರೋಪ ಕೇಳಿ ಬಂದಿದೆ.

ಮುಖ್ಯ ಶಿಕ್ಷಕ ಬಸವರಾಜ ರಕ್ಕಸಗಿ ಮಕ್ಕಳಿಂದ ತಮ್ಮ ಕಾರನ್ನು ಸ್ವಚ್ಛಗೊಳಿಸಿಕೊಂಡಿದ್ದಾರೆ. ನಾಲತವಾಡ ಪಟ್ಟಣದ ವಿರೇಶ್ವರ ವೃತ್ತದ ಬಳಿಯಿರುವ ಶಾಸಕರ ಮಾದರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಕಾರನ್ನು ನೀರಿನಿಂದ ತೊಳೆದಿದ್ದಾರೆ.

ಬಳಿಕ ಟವೆಲ್​ನಿಂದ ಕ್ಲೀನ್ ಮಾಡಿರುವಂತಹ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗ್ತಿದೆ. ಶಾಲಾ ಆವರಣದಲ್ಲೇ ಮಕ್ಕಳನ್ನ ಈ ರೀತಿ ಬಳಕೆ ಮಾಡಿಕೊಂಡಿದ್ದಕ್ಕೆ ಮುಖ್ಯ ಶಿಕ್ಷಕನ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.//////