Belagavi News In Kannada | News Belgaum

ಖಾಸಗಿ ಬಸ್-ಇನ್ನೋವಾ ಕಾರು ಅಪಘಾತ; ಅತ್ತೆ, ಸೊಸೆ ಸ್ಥಳದಲ್ಲೇ ಸಾವು

ರಾಯಚೂರು: ಖಾಸಗಿ ಬಸ್ ಹಾಗೂ ಇನ್ನೋವಾ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಅತ್ತೆ, ಸೊಸೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಾಯಗೊಂಡ ಘಟನೆ ರಾಯಚೂರಿನ ಕಸಬೆ ಕ್ಯಾಂಪ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಭೀಕರ ಅಪಘಾತದ ಪರಿಣಾಮ ಇನ್ನೋವಾ ಕಾರ್‌ನಲ್ಲಿದ್ದ ಮಾರಿಯಾ ಗೀತಾ (38) ಹಾಗೂ ಅಮಲ್ ಪಾಲ್ ಮೇರಿ (64) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೈದರಾಬಾದ್‌ನಿಂದ ಸಿಂಧನೂರು ಮಾರ್ಗವಾಗಿ ಹೊರಟಿದ್ದ ಖಾಸಗಿ ಬಸ್, ಗದಗದಿಂದ ರಾಯಚೂರು ಮಾರ್ಗವಾಗಿ ಬರುತ್ತಿದ್ದ ಇನ್ನೋವಾ ಕಾರ್‌ಗೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ.

ಕಾರ್‌ನಲ್ಲಿ ಒಟ್ಟು ಏಳು ಜನ ಪ್ರಯಾಣಿಸುತ್ತಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಉಳಿದ ಐದು ಜನರನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ./////