Belagavi News In Kannada | News Belgaum

ಗ್ಯಾರಂಟಿ ಯೋಜನೆಗಳು ಬಡವರಿಗೆ ಅನುಕೂಲ: ಮಾಜಿ ಸಚಿವ ಶಶಿಕಾಂತ ನಾಯಿಕ.

ಹುಕ್ಕೇರಿ: ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಜನರಿಗೆ ಆರ್ಥಿಕ ಹೊರೆ ತಗ್ಗಿದಂತಾಗಿದೆ ಎಂದು ಮಾಜಿ ಸಚಿವ ಶಶಿಕಾಂತ ನಾಯಿಕ ಹೇಳಿದರು.
ಪಟ್ಟಣದ ಹೊರವಲಯದ ರವದಿ ಫಾರ್ಮಹೌಸ್‌ನಲ್ಲಿ ಗುರುವಾರ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಹಾಗೂ ಪುರಸಭೆ ಸಹಯೋಗದಲ್ಲಿ ಏರ್ಪಡಿಸಿದ ಗ್ಯಾರಂಟಿ ಯೋಜನೆಗಳ ಹುಕ್ಕೇರಿ ಹೋಬಳಿ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಬಡ, ಮಧ್ಯಮ ವರ್ಗ ಹಾಗೂ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿವೆ ಎಂದರು..

ಅನ್ನಭಾಗ್ಯ, ಗೃಹಲಕ್ಷಿö್ಮÃ, ಶಕ್ತಿ, ಗೃಹಜ್ಯೋತಿ, ವಿದ್ಯಾನಿಧಿ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆಗೆ ಕಾರಣವಾಗಿ ಕಾಂಗ್ರೆಸ್ ಸರ್ಕಾರ ಜನಪರ ಎನ್ನುವುದನ್ನು ನಿರೂಪಿಸಿವೆ. ಗ್ಯಾರಂಟಿ ಯೋಜನೆಗಳು ಬಡವರ ಕಲ್ಯಾಣಕ್ಕೆ ಪೂರಕವಾಗಿವೆ. ಇಡೀ ರಾಜ್ಯದ ಜನತೆ ಸುಖಿ ಜೀವನ ಸಾಗಿಸುವಂತಾಗಿದೆ. ಈ ಎಲ್ಲ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಸುಖಿ ಜೀವನ ಸಾಗಿಸಬೇಕು ಎಂದು ಅವರು ಹೇಳಿದರು..

 

ತಹಸೀಲದಾರ ಬಲರಾಮ ಕಟ್ಟಿಮನಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಶಿರಸ್ತೆದಾರ ಲೋಕೋಶ ಢಂಗೆ, ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಸ್ಥಾನಿಕ ಇಂಜನೀಯರ್ ನೇಮಿನಾಥ ಖೆಮಲಾಪುರೆ, ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕರಾದ ಬಿ.ಎಸ್.ಪಾಟೀಲ, ವಿ.ಎಸ್.ಕಾಗವಾಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಎಚ್.ಹೊಳೆಪ್ಪ, ತಾಲೂಕು ಆರೋಗ್ಯ ಅಧಿಕಾರಿ ಡಾ.ಉದಯ ಕುಡಚಿ, ಕಂದಾಯ ನಿರೀಕ್ಷಕ ಮಲ್ಲಿಕಾರ್ಜುನ ಸಾರಾಪುರಿ, ಪಂಚಾಯತ್‌ರಾಜ್ ಸಹಾಯಕ ನಿರ್ದೇಶಕ ರಾಜು ಢಾಂಗೆ, ಪುರಸಭೆ

ಸದಸ್ಯೆ ರೇಖಾ ಚಿಕ್ಕೋಡಿ, ಕಾಂಗ್ರೆಸ್ ಪ್ರಚಾರ ಸಮಿತಿ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ರಾಶಿಂಗೆ, ಮುಖಂಡರಾದ ಕೆಂಪಣ್ಣಾ ಶಿರಹಟ್ಟಿ, ಪ್ರಕಾಶ ಮೈಲಾಖೆ, ಕೆ.ವೆಂಕಟೇಶ, ಲಕ್ಷö್ಮಣ ಹೂಲಿ, ಕಿರಣ ಕರೋಶಿ, ಅನಂದ ಜಿರಲಿ, ಪ್ರಕಾಶ ಪಟ್ಟಣಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಎಸ್.ಆರ್.ಗಸ್ತಿ ನಿರೂಪಿಸಿ ವಂದಿಸಿದರು.