Belagavi News In Kannada | News Belgaum

ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕಾರ: ಇನ್ಮುಂದೆ ಕನಿಷ್ಟ ‘2 ವರ್ಷ’ಕ್ಕೊಮ್ಮೆ ವರ್ಗಾವಣೆ

ಬೆಂಗಳೂರು: ವಿಧಾನಸಭೆಯಲ್ಲಿ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಇದರೊಂದಿಗೆ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪೊಲೀಸರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇನ್ಮುಂದೆ ಕನಿಷ್ಠ 2 ವರ್ಷಕ್ಕೊಮ್ಮೆ ಪೊಲೀಸರ ವರ್ಗಾವಣೆಯಾಗಲಿದೆ.

 

ಈ ಕುರಿತಂತೆ ನಿವೃತ್ತ ಪೊಲೀಸ್ ಅಧಿಕಾರಿ ಶಂಕರ್ ಬಿದರಿಯವರು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಬದಲಾವಣೆಗೆ ಮನವಿ ಮಾಡಿದ್ದರು.

ಈ ಮನವಿಗೆ ಒಪ್ಪಿಗೆ ಸೂಚಿಸಿದ್ದಂತ ಅವರು, ವಿಧಾನಸಭೆಯಲ್ಲಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿದ್ದರು. ಇಂತಹ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ..

 

ಇನ್ನೂ ಈ ಬೆನ್ನಲ್ಲೇ ವಿಧಾನ ಪರಿಷತ್ತಿನಲ್ಲಿಯೂ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕವನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಂಡಿಸಿದ್ದಾರೆ. ಇಲ್ಲಿಯೂ ಅಂಗೀಕಾರ ದೊರೆತರೇ, ಪೊಲೀಸರ ವರ್ಗಾವಣೆ ಮತ್ತಷ್ಟು ಸುಲಭವಾಗಲಿದೆ..

 

ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕರಾದಿಂದಾಗಿ ಕನಿಷ್ಠ 2 ವರ್ಷಕ್ಕೊಮ್ಮೆ ಪೊಲೀಸರ ವರ್ಗಾವಣೆಗೆ ಅಧಿಸೂಚನೆ ಹೊರ ಬೀಳಲಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪೊಲೀಸರಿಗೆ ಗುಡ್ ನ್ಯೂಸ್ ದೊರೆತಂತೆ ಆಗಲಿದೆ.