Belagavi News In Kannada | News Belgaum

ನಿತಿನ್ ಗಡ್ಕರಿಯನ್ನು ಕೊಂಡಾಡಿದ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರು ಪಕ್ಷಾತೀತವಾಗಿ ಕೆಲಸ ಮಾಡುವ ಮೂಲಕ ರಾಜ್ಯದ ರಸ್ತೆ ಕಾಮಗಾರಿಗಳಿಗೆ ವೇಗ ಸಿಕ್ಕಿದೆ‌. ಅವರು ದೇಶದಾದ್ಯಂತ ಮಾಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಗಮನಿಸಿದರೆ ಅವರಿಗೆ “ರಸ್ತೆಗಳ ಮಹಾರಾಜ್” ಎಂದು ಕರೆಯಬಹುದು ಎಂದು ಸತೀಶ್ ಜಾರಕಿಹೊಳಿ ಅವರು ನಿತಿನ್ ಗಡ್ಕರಿ ಅವರನ್ನು ಕೊಂಡಾಡಿದರು.

ಬೆಳಗಾವಿ ಜಿಲ್ಲೆಯ 1622 ಕೋಟಿ ವೆಚ್ಚದ ಹೊನಗಾ-ಝಾಡಶಹಾಪುರ ಚತುಷ್ಪಥ ರಿಂಗ್ ರಸ್ತೆ, 941 ಕೋಟಿ ವೆಚ್ಚದ ಚಿಕ್ಕೋಡಿ ಬೈಪಾಸ್ ನಿಂದ-ಗೋಟೂರವರೆಗಿನ ಚತುಷ್ಪಥ ಹಾಗೂ ಶಿರಗುಪ್ಪಿಯಿಂದ ಅಂಕಲವರೆಗಿನ 887 ಕೋಟಿ ವೆಚ್ಚದ ರಸ್ತೆ ಅಗಲೀಕರಣ ಸೇರಿದಂತೆ ಒಟ್ಟಾರೆ 13 ಸಾವಿರ ಕೋಟಿ ಮೌಲ್ಯದ 680 ಕಿ.ಮೀ. ಉದ್ದದ 36 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಗುರುವಾರ(ಫೆ‌22) ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಸಮರ್ಪಣೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗಡ್ಕರಿಗೆ “ರಸ್ತೆಗಳ ಮಹಾರಾಜ್” ಎಂದ ಸತೀಶ್:  ನಿತಿನ್ ಗಡ್ಕರಿ ಅವರು ತಮ್ಮ ಕಾರ್ಯಾ ಅವಧಿಯಲ್ಲಿ ಸುಮಾರು 50 ಸಾವಿರ ಲಕ್ಷ ಕೋಟಿಗಳಷ್ಟು  ಕೆಲಸ ಮಾಡಿದ್ದಾರೆ. ಆದ್ದರಿಂದ ಇವರಿಗೆ ರಸ್ತೆಗಳ ಮಹಾರಾಜ ಎಂದರೆ ತಪ್ಪಾಗಲಾರದು ಎಂದ ಅವರು,   ಮುಂದಿನ ಎರಡು ಮೂರು ವರ್ಷಗಳಲ್ಲಿ ರಾಜ್ಯದ ರಸ್ತೆಗಳು ಸುಧಾರಣೆಯಾಗಬೇಕು. ರಸ್ತೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಸಮಗ್ರ ಅಭಿವೃದ್ಧಿಗೊಳಿಸುವುದು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕನಸಾಗಿದೆ ಎಂದ ಅವರು, ಕೇಂದ್ರ‌ ರಸ್ತೆ‌ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರು, ಕುಂಠಿತಗೊಂಡಿರುವ 18 ಕಾಮಗಾರಿಗಳನ್ನು ತ್ವರಿತಗೊಳಿಸಲು ಅನುಕೂಲವಾಗುವಂತೆ ರಾಜ್ಯ ಸರಕಾರವು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.

ಮುಂದಿನ ಎರಡು ಮೂರು ವರ್ಷಗಳಲ್ಲಿ ರಾಜ್ಯದ ರಸ್ತೆಗಳು ಸುಧಾರಣೆಯಾಗಬೇಕು. ರಸ್ತೆಗಳನ್ನು ಅಭಿವೃದ್ಧಿಪಡಿಸುವ ಮೂಲಕ ಸಮಗ್ರ ಅಭಿವೃದ್ಧಿಗೊಳಿಸುವುದು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕನಸಾಗಿದೆ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದರು.