Belagavi News In Kannada | News Belgaum

ಯುವನಿಧಿ ಯೋಜನೆ: ಸ್ವಯಂ ಘೋಷಣೆ ಗೆ ಫೆ.29 ರವರಗೆ ವಿಸ್ತರಣೆ

ಬೆಳಗಾವಿ: ಕರ್ನಾಟಕ ಸರ್ಕಾರದ ಐದನೇ ಗ್ಯಾಂಟಿ ಯೋಜನೆಯಾದ ಯುವನಿಧಿ ಯೋಜನೆ ಅನುಷ್ಟಾನಗೊಳಿಸುವ ಭಾಗವಾಗಿ ಯುವನಿಧಿ ಯೋಜನೆಯ ನೋಂದಣ ಪ್ರಕ್ರಿಯೆಯು ಈಗಾಗಲೇ ಪ್ರಾರಂಭಿಸಲಾಗಿದೆ.

ಯುವನಿಧಿ ಯೋಜನೆಯಡಿ ಅರ್ಹತೆ ಹೊಂದಿದ್ದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್ ನಲ್ಲಿ ಫೆಬ್ರವರಿ-29 ರ ವರೆಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನೆವರಿ-2024 ರಂದು ನೇರ ನಗದು ವರ್ಗಾವಣೆ ಮಾಡಲಗಾಗಿದೆ.

ಈ ಯೋಜನೆಯಡಿ ಪ್ರತಿ ತಿಂಗಳು ಪಡೆಯಬೇಕಾದರೆ ಪ್ರತಿ ತಿಂಗಳಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲ, ಸ್ವಯಂಉದ್ಯೋಗ ಇಲ್ಲ ಎಂದು ಸ್ವಯಂಘೋಷಣೆ ಮಾಡ ಬೇಕಾಗಿರುತ್ತದೆ.

ಪ್ರಯೋಜನ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತಿ ತಿಂಗಳು 25 ರೊಳಗೆ ಸ್ವಯಂಘೋಷಣೆಕಡ್ಡಾಯವಾಗಿ ಮಾಡಬೇಕು. ಘೋಷಣೆ ಮಾಡದೇಇರುವ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ.  https://sevasindhugs.karnataka.gov.in

ವೆಬ್‍ಸೈಟ್ ವೀಕ್ಷಿಸಬಹುದು.
ಹೆಚ್ಚಿನ ವಿವರಗಳಿಗೆ. 0831-2443948 ಸಂಖ್ಯೆಗೆ ಸಂಪರ್ಕಿಸ ಬಹುದು ಎಂದು ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳು, ಇವರು ತಿಳಿಸಿದ್ದಾರೆ.