Belagavi News In Kannada | News Belgaum

ಸರ್ವತೋಮುಖ ಬೆಳವಣಿಗೆಗೆ ಶಿಬಿರ ಸಹಕಾರಿ

ಕೆಂಭಾವಿ:ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಸೇವಾ ಮನೋಭಾವ ಮೈಗೂಡಿಸಿಕೊಂಡು ರಾಷ್ಟ್ರದ ಏಳಿಗೆಗೆ ಶ್ರಮಿಸಬೇಕು ಎಂದು ಯುವ ಮುಖಂಡ ಆದಿತ್ಯ. ಎಸ್. ಪೋಲೀಸ್ ಪಾಟೀಲ್ ಹೇಳಿದರು.
ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು ಶಿಬಿರಾರ್ಥಿಗಳು ಏಳು ದಿನಗಳ ಕಾಲ ನಡೆಯುವ ವಿಶೇಷ ಶಿಬಿರದ ಸದುಪಯೋಗ ಪಡಿಸಿಕೊಂಡು ಉತ್ತಮ ವಿದ್ಯಾರ್ಥಿಗಳಾಗಿ, ಉತ್ತಮ ಪ್ರಜೆಗಳಾಗಿ, ಉತ್ತಮ ನಾಯಕರಾಗಿ ಎಂದ ಅವರು, ಸಮಾಜದ ಸರ್ವತೋಮುಖ ಬೆಳವಣಿಗೆಗೆ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಹಕಾರಿಯಾಗುತ್ತದೆ. ವಿದ್ಯಾರ್ಥಿಗಳು ಶ್ರಮವೇ ಜಯತೇ ಎಂಬು ಧ್ಯೇಯ ವಾಕ್ಯ ಪರಿಪಾಲನೆ ಮಾಡಿದರೆ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ, ರಾಜಕೀಯ, ಧಾರ್ಮಿಕ, ಕ್ಷೇತ್ರದಲ್ಲಿ ಸಾಧನೆಗೈದು ತಮ್ಮದೇಯಾದ ಛಾಪು ಮೂಡಿಸಲು ಸಾಧ್ಯವಾಗುತ್ತದೆ ಎಂದರು.
ವಾಣಿಜ್ಯ ವಿಭಾಗದ ಮುಖ್ಯಸ್ಥರು ಹಾಗೂ ಎನ್ ಎಸ್ ಎಸ್ ಅಧಿಕಾರಿ ಡಾ. ಸಿದ್ದಲಿಂಗ ರಾಠೋಡ್ ಪ್ರಾಸ್ತಾವಿಕ ಮಾತನಾಡಿ ಶಿಬಿರದ ಧ್ಯೇಯೋದ್ದೇಶಗಳನ್ನು ತಿಳಿಸಿದರು.
ಪ್ರಾಂಶುಪಾಲ ಡಾ ನಾಗಪ್ಪ ಚವಲ್ಕರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಡಾ ನಂದಾ ವಾರದ, ನಸ್ರೀನ್ ತಾಜಾ, ಗುಲಾಂ ಮಹಿಬೂಬಸಾಬ್, ಮಲ್ಲಣ್ಣ ಬಿಳೇಬಾವಿ, ಡಾ ಯಂಕನಗೌಡ ಪಾಟೀಲ್, ಮಾಸುಮ ಅಲಿ ನಾಶಿ, ಸೇರಿದಂತೆ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ಮತ್ತು ಶಿಬಿರಾರ್ಥಿಗಳು ಭಾಗವಹಿಸಿದ್ದರು.