Belagavi News In Kannada | News Belgaum

ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ; ಬಾಣಂತಿ ಸಾವು

ಕೋಲಾರ: ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಭವಾನಿ (26) ಎಂದು ಗುರುತಿಸಲಾಗಿದೆ.

ನಿನ್ನೆ ಬೆಳಗ್ಗೆ ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಭವಾನಿ ಸಂಜೆ ವೇಳೆಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
ಇಬ್ಬರು ಕ್ಷೇಮವಾಗಿದ್ದರು. ಆದರೆ ಮಧ್ಯರಾತ್ರಿ ವೇಳೆಗೆ ತೀವ್ರ ನೋವು ಕಾಣಿಸಿಕೊಂಡ ಹಿನ್ನಲೆ ವೈದ್ಯರು ಇಂಜೆಕ್ಷನ್ ನೀಡಿದ್ದಾರೆ. ಇದಾದ ನಂತರ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ ಭವಾನಿ ಕೊನೆಯುಸಿರೆಳೆದಿದ್ದಾರೆ.

ತೀವ್ರ ನೋವಿನಿಂದ ಬಳಲುತ್ತಿದ್ದ ಬಾಣಂತಿಗೆ ವೈದ್ಯರು ಇಂಜೆಕ್ಷನ್ ನೀಡಿದ ಸ್ವಲ್ಪ ಹೊತ್ತಿನ ನಂತರ ಬಾಣಂತಿ ಭವಾನಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಕುಟುಂಬಸ್ಥರು ಕೋಲಾರ ಜಿಲ್ಲಾಸ್ಪತ್ರೆ ವೈದ್ಯೆ ಡಾ. ಶಾಂತಾ ವಿರುದ್ಧ ಕೋಲಾರ ಟೌನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪತ್ನಿ ಸಾವಿಗೆ ನ್ಯಾಯ ಬೇಕು ಎಂದು ಪತಿ ಗೋಪಾಲ್ ಸೇರಿದಂತೆ ಮೃತಳ ಕುಟುಂಬಸ್ಥರು ಮನವಿ ಮಾಡಿದ್ದಾರೆ./////