Belagavi News In Kannada | News Belgaum

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಪ್ರತಿಭಾ ಎಂ ನಾಯ್ಕ ಕೋಂ ಮಹೇಶ್ ನಾಯ್ಕ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇ-ಸ್ವತ್ತು ಮಾಡಿಸಲು ಲಂಚದ ಪಡೆದ ಸೊರಬ ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ.

ಪ್ರತಿಭಾ ಎಂಬುವವರ ಹಳೇ ಸೊರಬ ಪುರಸಭೆ ವ್ಯಾಪ್ತಿಯಲ್ಲಿ ಇರುವ ಖಾಲಿ ನಿವೇಶನದ ಇ-ಸ್ವತ್ತು ಮಾಡಿಸಲು ಕಂದಾಯ ನಿರೀಕ್ಷಕ ವಿನಾಯಕರವರನ್ನು ಭೇಟಿ ಮಾಡಿ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಿರುತ್ತಾರೆ. ಈ ಸಂದರ್ಭ ಕಂದಾಯ ನಿರೀಕ್ಷಕರು 40000/- ರೂ.ಗಳ ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದು, ಅರ್ಜಿದಾರರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತಾರೆ. ಈ ದೂರಿನನ್ವಯ ಪೊಲೀಸ್ ನಿರೀಕ್ಷಕ ಪ್ರಕಾಶ್‍ರವರ ತಂಡವು ಈತನನ್ನು ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಹಿಡಿದು ಹಣವನ್ನು ಜಪ್ತಿ ಮಾಡಿ, ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಲಾಗಿದೆ./////