Belagavi News In Kannada | News Belgaum

ಪಲ್ಟಿ ಹೊಡೆದ ಕಾರು; ವಕೀಲ ಸ್ಥಳದಲ್ಲೇ ಸಾವು

ಕೋಲಾರ:  ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಭೀಕರ ಅಪಘಾತ ಶ್ರೀನಿವಾಸಪುರ ತಾಲ್ಲೂಕಿನ ಅವಗಾನಪಲ್ಲಿ ಗ್ರಾಮದ ಬಳಿ ನಡೆದಿದೆ. ದುರಂತದಲ್ಲಿ 40 ವರ್ಷದ ಮುಬಾರಕ್ ಪಾಷಾ ಎಂಬ ವಕೀಲ ಮೃತಪಟ್ಟಿದ್ದಾರೆ.

ವಕೀಲ ಮುಬಾರಕ್ ಪಾಷ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಪಟ್ಟಣದ ನಿವಾಸಿ. ರಸ್ತೆ ತಿರುವಿನಲ್ಲಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದು ಪಲ್ಟಿ ಹೊಡೆದಿದೆ. ಕೂಡಲೇ ಸ್ಥಳೀಯರು ಅಪಘಾತದ ಸ್ಥಳಕ್ಕೆ ಬಂದು ಚಾಲಕನ ಬದುಕಿಸೋ ಪ್ರಯತ್ನ ಮಾಡಿದ್ದಾರೆ.

ಕಾರು ಪಲ್ಟಿಯಾಗಿ ಕಾರಿನಲ್ಲಿದ್ದ ವಕೀಲನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರ ಸಹಾಯದೊಂದಿಗೆ ಶ್ರೀನಿವಾಸಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.//////