Belagavi News In Kannada | News Belgaum

ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಇದೀಗ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ಅಧಿಸೂಚನೆ ಪ್ರಕಟನೆ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2019ರ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಇದೀಗ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ಅಧಿಸೂಚನೆ ಪ್ರಕಟನೆ ಮಾಡುವ ಮೂಲಕ ಈ ಕಾಯ್ದೆಯನ್ನು ಜಾರಿಗೊಳಿಸಿದೆÉ. ಈ ಕಾಯ್ದೆಯಡಿ ಮಸ್ಲಿಂಮೇತರ ಧರ್ಮಗಳ ನಿರಾಶ್ರಿತರಿಗೆ ಪೌರತ್ವ ನೀಡಲಾಗುತ್ತದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.
ಪೌರತ್ವ (ತಿದ್ದುಪಡಿ) ಕಾಯಿದೆ 2019 ಎಂಬುದು, ಭಾರತದ ಮೂರು ನೆರೆಯ ರಾಷ್ಟ್ರಗಳಾದ ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಧಾರ್ಮಿಕ ಆಧಾರದ ಮೇಲೆ ಕಿರುಕುಳಕ್ಕೊಳಗಾದ ನಂತರ ಭಾರತಕ್ಕೆ ಬಂದ ನಿರಾಶ್ರಿತರಿಗೆ ಮತ್ತು 31 ಡಿಸೆಂಬರ್ 2014 ಕ್ಕಿಂತ ಮೊದಲು ಭಾರತದಲ್ಲಿ ಆಶ್ರಯ ಪಡೆದ ನಿರಾಶ್ರಿತರಿಗೆ ಭಾರತೀಯ ಪೌರತ್ವದ ಹಕ್ಕನ್ನು ನೀಡುವ ಕಾನೂನಾಗಿದೆ ಎಂದರು.
2016ರ ಸಂಸತ್ತಿನಲ್ಲಿ ಮಂಡನೆಯಾದ ಈ ಕಾಯ್ದೆಯು 10 ಡಿಸೆಂಬರ 2019ರಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಕಾಯ್ದೆಯನ್ನು ಪಾಸ್ ಮಾಡಲಾಗಿತ್ತು. 12 ಡಿಸೆಂಬರ 2019ರಲ್ಲಿ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಗಳು ಸಹಿ ಹಾಕಿದ ನಂತರ ದೇಶದಲ್ಲಿ ಭಾರೀ ಪ್ರತಿಭಟನೆ ನಡೆದ ಕಾರಣ ಇಲ್ಲಿಯವರೆಗೆ ಸಿಎಎ ಜಾರಿಯಾಗಿರಲಿಲ್ಲ. ಈ ಹಿಂದಿನ ಚುನಾವಣೆಯ ಸಂದರ್ಭದಲ್ಲಿ ಸಿಎಎ ಜಾರಿಗೊಳಿಸುತ್ತೇವೆ ಎಂದು ಪಕ್ಷವು ಪ್ರಣಾಳಿಕೆಯಲ್ಲಿ ಪ್ರಕಟಿಸಿತ್ತು. ಈಗ ಲೋಕಸಭಾ ಚುನಾವಣೆಗೂ ಮುನ್ನ ಸಿಎಎ ಜಾರಿಗೊಳಿಸುವ ಮೂಲಕ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಇಡೇರಿಸಿದೆ. ಈ ಐತಿಹಾಸಿಕ ನಿರ್ಧಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದೇಶದ ಜನತೆಯ ಪರವಾಗಿ ಅಭಿನಂಧÀನೆಗಳನ್ನು ತಿಳಿಸಿದ್ದಾರೆ.