Belagavi News In Kannada | News Belgaum

ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವು

ಬೆಂಗಳೂರು: ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ತಾತಗುಣಿ ಬಳಿಯ ಆಗರ ಕೆರೆಯಲ್ಲಿ ನಡೆದಿದೆ.

ಸ್ನೇಹಿತರ ಜತೆ ಈಜಲು ತೆರಳಿದ್ದಾಗ ದುರ್ಘಟನೆ ನಡೆದಿದೆ. ಕೆಂಗೇರಿ ಉಪನಗರ ಸರ್ಕಾರಿ ಪ್ರೌಢ ಶಾಲೆಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಾದ ಪೃಥ್ವಿರಾಜ್, ನವೀನ್ ಮೃತರು. ಇವರು ದೊಡ್ಡಬೆಲೆ ಮೂಲದವರು ಎನ್ನಲಾಗಿದ್ದು, ಒಟ್ಟು 11 ವಿದ್ಯಾರ್ಥಿಗಳು ಆಗರ ಕೆರೆಯಲ್ಲಿ ಈಜಲು ತೆರಳಿದ್ದಾಗ, ಇಬ್ಬರು ನೀರಿನಲ್ಲಿ ಮುಳುಗಿದ್ದಾರೆ. ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಮತ್ತು ಅಗ್ನಿ ಶಾಮಕ ದಳ ಆಗಮಿಸಿ ಮೃತದೇಹಗಳನ್ನು ಹೊರತೆಗೆದು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.