Belagavi News In Kannada | News Belgaum

ಸರಳ, ಅರ್ಥಪೂರ್ಣ ಜಯಂತಿಗಳ ಆಚರಣೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚನೆ

ವಿವಿಧ ಜಯಂತಿಗಳ ಪೂರ್ವಭಾವಿ ಸಭೆ

 

ಬೆಳಗಾವಿ,ಮಾ.15 : ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಮಾ.23 ರಂದು ಶ್ರೀ ರೇಣುಕಾಚಾರ್ಯ ಜಯಂತಿ ಮತ್ತು ಮಾ.28 ರಂದು ಶ್ರೀ ಯೋಗಿ ನಾರೇಯಣ ಯತಿಂದ್ರರ ಜಯಂತಿ, ಶ್ರೀ ಅಗ್ನಿಬನ್ನಿರಾಯ ಜಯಂತಿ ಆಚರಣೆ ಸರಳ, ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ (ಮಾ.15) ನಡೆದ ವಿವಿಧ ಜಯಂತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಲೋಕೊಸಭೆ ಚುನಾವಣೆ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ. ಸ್ಥಳೀಯ ಜನ ಪ್ರತಿನಿಧಿಗಳ ಆಹ್ವಾನಕ್ಕೆ ಉಪನ್ಯಾಸ ಕಾರ್ಯಕ್ರಮ ಆಯೋಜನೆಗೆ ಅವಕಾಶವಿರುವುದಿಲ್ಲ ಹಾಗಾಗಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಸರ್ಕಾರದ ಮಾರ್ಗಸೂಚಿ ಅನ್ವಯ ಕೇವಲ ಸರಳವಾಗಿ ಭಾವಚಿತ್ರ ಪೂಜೆಗೆ ಮಾತ್ರ ಅವಕಾಶ ಇರಲಿದೆ. ಅದೇ ರೀತಿಯಲ್ಲಿ ಮಾ.28 ರಂದು ಗುರುವಾರ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಶ್ರೀ ಯೋಗಿ ನಾರೇಯಣ ಯತಿಂದ್ರರ ಜಯಂತಿ (ಕೈವಾರ ತಾತಯ್ಯ), ಶ್ರೀ ಅಗ್ನಿಬನ್ನಿರಾಯ ಜಯಂತಿ ಆಚರಣೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಸರಳವಾಗಿ ಆಚರಣೆ ಮಾಡಲಾಗುವುದು. ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಸ್ಥಳ ನಿಗದಿಪಡಿಸುವ ಕುರಿತು ಸಮಾಜದ ಬಾಂದವರೊಡನೆ ಸಭೆ ಕರೆದು ಚರ್ಚಿಸಿ ಬಳಿಕ ತಿಳಿಸಲಾಗುವುದು ಎಂದು ಸಮಾಜದ ಮುಖಂಡರು ಮನವಿ ಮಾಡಿಕೊಂಡರು.

ಮಹಾನಗರ ಪಾಲಿಕೆ ಆಯುಕ್ತ ಲೋಕೇಶ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ವಿವಿಧ ಸಮಾಜದ ಮುಖಂಡರಾದ ಸದಾನಂದ ತೆಲಂಗ, ರಾಮು ನಾಯ್ಡು, ವೆಂಕಟೇಶ ತೆಲಂಗ, ಭಾರತಿ ಮಠದ, ಬಸವರಾಜ ಹಿರೇಮಠ, ರಶ್ಮಿ ಮಠಪತಿ ಸೇರಿದಂತೆ ಮತ್ತಿತರು ಸಭೆಯಲ್ಲಿ ಉಪಸ್ಥಿತರಿದ್ದರು.