Belagavi News In Kannada | News Belgaum

ದಾಖಲೆಯಿಲ್ಲದೆ ಕಾರಿನಲ್ಲಿ ಹಣ ಸಾಗಾಟ: 32.90 ಲಕ್ಷ ಜಪ್ತಿ

ಕೊಪ್ಪಳ: ದಾಖಲೆಯಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಮತ್ತು ತಹಶೀಲ್ದಾರ್ ಯು.ನಾಗರಾಜ ಅವರು ಜಪ್ತಿ ಮಾಡಿಕೊಂಡಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಮೂರು ಕಡೆ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಗಂಗಾವತಿ ತಾಲ್ಲೂಕಿನ ಕಡೆಬಾಗಿಲು ಗ್ರಾಮದ ಚೆಕ್ ಪೋಸ್ಟ್ ಬಳಿ ದಾಖಲೆಯಿಲ್ಲದೆ

ಕಾರಿನಲ್ಲಿ ಸಾಗಿಸುತ್ತಿದ್ದ ಹಣ ವಶಕ್ಕೆ ಪಡೆಯಲಾಗಿದೆ. ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನಿಂದ ಹೊಸಪೇಟೆಗೆ ಪೀರಸಾಬ್ ಎನ್ನುವ ವ್ಯಕ್ತಿ ಹಣ ತೆಗೆದುಕೊಂಡು ಹೋಗುತ್ತಿದ್ದರು. ಅನುಮಾನಗೊಂಡ ಸಿಬ್ಬಂದಿ ತಪಾಸಣೆ ನಡೆಸಿದಾಗ ಹಣಕ್ಕೆ ದಾಖಲೆಯಿಲ್ಲದೇ ಇರುವುದು ಗೊತ್ತಾಗಿದೆ. ದಾಖಲೆ ನೀಡುವಂತೆ ಕೇಳಿದಾಗ, ಹಣಕ್ಕೆ ದಾಖಲೆಗಳು ಇರಲಿಲ್ಲ. ಹಣ ಯಾರಿಗೆ ಸೇರಿದ್ದು, ಯಾವ ಕಾರಣಕ್ಕೆ ಸಾಗಿಸಲಾಗುತ್ತಿದೆ? ಎಂಬುದು ಗೊತ್ತಾಗಿಲ್ಲ. ವಿಚಾರಣೆ ನಡೆಸಲಾಗುತ್ತದೆ ಎಂದು ತಹಶೀಲ್ದಾರ್ ಯು.ನಾಗರಾಜ ತಿಳಿಸಿದ್ದಾರೆ.