Belagavi News In Kannada | News Belgaum

ಗ್ರಾಮೀಣ ಪ್ರದೇಶ ಕುಡಿಯುವ ನೀರಿನ ಸಮಸ್ಯೆ; ಸಹಾಯವಾಣಿ ಕೇಂದ್ರ ಆರಂಭ

ಬೆಳಗಾವಿ,ಮಾ.19 : ಗಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಿದ್ದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ನಿರ್ವಹಿಸಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಬೆಳಗಾವಿ ಹಾಗೂ ಚಿಕ್ಕೋಡಿ 24*7 ಕಂಟ್ರೋಲ್ ರೂಮ್‍ನ್ನು ತೆರೆಯಲಾಗಿರುತ್ತದೆ.

ಬೆಳಗಾವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ 06 ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳಲ್ಲಿ ಇರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಹಾಯವಾಣಿ ಕೇಂದ್ರ ದೂರವಾಣಿ 0831-2420835 ಗೆ ಹಾಗೂ ಚಿಕ್ಕೋಡಿ ವಿಭಾಗದೆ ವ್ಯಾಪ್ತಿಯಲ್ಲಿ ಬರುವ 08 ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳಲ್ಲಿ ಇರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಹಾಯವಾಣಿ ಕೇಂದ್ರ ದೂರವಾಣಿ 08338-275101 ಗೆ ಸಂಪರ್ಕಿಸಬೇಕೆಂದು ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ