Belagavi News In Kannada | News Belgaum

ಲೋಕಸಭೆ ಚುನಾವಣೆಯಲ್ಲಿ ಕಾರ್ಯಕರ್ತರ ಪಾತ್ರ ಬಹಳ ಮುಖ್ಯ: ಸಚಿವ ಸತೀಶ್ ಜಾರಕಿಹೊಳಿ

ಹುಕ್ಕೇರಿ: ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಪಾಕಿಸ್ತಾನ,ರಾಮ ಮಂದಿರ ಮತ್ತು ಸರ್ಜಿಕಲ್ ಸ್ಟ್ರೈಕ್ ಹೆಸರಿನಲ್ಲಿ ಪ್ರಚಾರ ಗಿಟ್ಟಿಸಿಕೊಂಡಿದೆ.ಆದರೆ ನಾವು ರಾಜ್ಯದಲ್ಲಿ ಚುನಾವಣೆ ಪೂರ್ವ ನೀಡಿದ ಭರವಸೆಗಳನ್ನು ಸಂಪೂರ್ಣವಾಗಿ ಜಾರಿಗೆ ತರುವ ಮೂಲಕ ಜನತೆಗೆ ನೀಡಿದ ಭರವಸೆಗಳನ್ನ ಈಡೇಸಿದ್ದೆವೆ ಎಂದು  ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಪಟ್ಟಣದ ನೇಸರಿ ಗಾರ್ಡನ್ ದಲ್ಲಿ  ಗುರುವಾರ ಚಿಕ್ಕೋಡಿ ಲೋಕಸಭಾ ಚುನಾವಣಾ ನಿಮಿತ್ತ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ  ಅವರ ನೇತೃತ್ವದಲ್ಲಿ  ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುತ್ತಿದೆ.ಗ್ಯಾರಂಟಿ ಯೋಜನೆಗಳ ಕುರಿತು ಬಗ್ಗೆ  ಜನರಿಗೆ ಮಾಹಿತಿ ನೀಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನ ಬೆಂಬಲಿಸುವಂತೆ ಮನವರಿಕೆ ಮಾಡಬೇಕೆಂದು ಮನವಿ ಮಾಡಿಕೊಂಡರು.

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪರ ಒಲವು ಇದ್ದು,ಮತದಾರರು ಕಾಂಗ್ರೆಸ್‌ಗೆ ಹೆಚ್ಚಿನ ಮತ ಚಲಾಯಿಸುವುದರ ಮೂಲಕ ಗೆಲುವಿಗೆ ಸಹಕರಿಸಬೇಕು.ಕಾಂಗ್ರೆಸ್ ಅಭ್ಯರ್ಥಿ ಯಾರೆ ಆದರು,ಎಲ್ಲರೂ ಕಾಂಗ್ರೆಸ್ ಗೆಲುವಿಗೆ  ಸನ್ನದ್ದರಾಗಬೇಕು,ಚುನಾವಣೆಯಲ್ಲಿ ಕಾರ್ಯಕರ್ತರು ಪಾತ್ರ ಬಹಳ ಮುಖ್ಯ ಎಂದರು.
ಬುಡಾ ನೂತನ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಮಾತನಾಡಿ,ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದ್ದು,ಬಡ ಜನರ ಪರ ಯೋಜನೆ ರೂಪಿಸಿ ಯಶಸ್ವಿಯಾಗಿರುವ ಕಾಂಗ್ರೆಸ್ ಪಕ್ಷದ ಪರ ರಾಜ್ಯದಲ್ಲಿ ಗಾಳಿ ಬಿಸುತ್ತಿದ್ದು,ಸಚಿವ ಸತೀಶ ಜಾರಕಿಹೋಳಿ ಅವರ ಸಾಮಾಜಿಕ ನ್ಯಾಯ ಪರ ಕಾರ್ಯ ನಿರ್ವಹಿಸಿದ್ದಾರೆ‌.ಈ ಬಾರಿ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸೋಣ  ಎಂದರು‌.
ಮಾಜಿ ಸಚಿವ ಎ.ಬಿ.ಪಾಟೀಲ ಮಾತನಾಡಿ ಕಳೆದ ಹತ್ತು ವರ್ಷದಿಂದ ಕೆಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ,ಸುಳ್ಳು ಆಶ್ವಾಸನೆ ನೀಡುತ್ತಾ ಬಂದಿದ್ದಾರೆ.ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಚುನಾವಣೆ ಪೂರ್ವ ನೀಡಿದ್ದ ಭರವಸೆಗಳನ್ನ ಈಡೇರಿಸಿದ್ದು,ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತ ಕಾಂಗ್ರೆಸ್ ಪಕ್ಷಕ್ಕೆ ನೀಡುವಂತೆ ಕರೆ ನೀಡಿದರು.
ಮಾಜಿ ಸಚಿವ ಶಶಿಕಾಂತ ನಾಯಿಕ ಮಾತನಾಡಿ ಕಾಂಗ್ರೆಸ್ ಕಾರ್ಯಕರ್ತರು ಸಣ್ಣ ಪುಟ್ಟ ಸಮಸ್ಯೆಗಳನ್ನ ಬದಿಗಿಟ್ಟು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಯನ್ನ ಗೆಲ್ಲಿಸುವ ಕಾರ್ಯ ಮಾಡಬೇಕು ಎಂದು ಮನವಿ ಮಾಡಿಕೊಂಡರು.


ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಮಹೇಶ ಹಟ್ಟಿಹೋಳಿ, ಸಂಕೇಶ್ವರ ಬ್ಲಾಕ್ ಅದ್ಯಕ್ಷ ಸಂತೋಷ ಮುಡಶಿ, ಹುಕ್ಕೇರಿ ಬ್ಲಾಕ್ ಅಧ್ಯಕ್ಷ ವಿಜಯ ರವದಿ, ಪುರಸಭೆ ಸದಸ್ಯರಾದ ಡಾ.ಜಯಪ್ರಕಾಶ ಕರಜಗಿ, ವಿನೋದ ನಾಯಿಕ, ದಿಲೀಪ್ ಹೊಸಮನಿ, ಚಿದಾನಂದ ಕರದನ್ನವರ, ಮಾರುತಿ ಕುಂದಿ ಇದ್ದರು./////