Belagavi News In Kannada | News Belgaum

ಸಿಎಂ ಭೇಟಿಯಾಗಿ ಆಶೀರ್ವಾದ ಪಡೆದ ಮೃಣಾಲ ಹೆಬ್ಬಾಳಕರ್

ಬೆಳಗಾವಿ:  ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮೃಣಾಲ ಹೆಬ್ಬಾಳಕರ್ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಶಿರ್ವಾದ ಪಡೆದರು.

ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಮೃಣಾಲ ಹೆಬ್ಬಾಳಕರ್ ಬೆಳಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ತಮಗೆ ಟಿಕೆಟ್ ನೀಡಿರುವುದಕ್ಕೆ ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದ ಮೃಣಾಲ ಹೆಬ್ಬಾಳಕರ್, ಆಶಿರ್ವಾದ ಪಡೆದರು. ಸಿಎಂ ಸಿದ್ದರಾಮಯ್ಯ ಮೃಣಾಲ ಹೆಬ್ಬಾಳಕರ್ ಅವರನ್ನು ಆಶಿರ್ವದಿಸಿ, ಶುಭ ಕೋರಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.///////