Belagavi News In Kannada | News Belgaum

ಶ್ರೀ ಡಾ. ಶಿವಾನಂದ ಭಾರತಿ ಸ್ವಾಮೀಜಿ ಆಶೀರ್ವಾದ ಪಡೆದ ರಾಹುಲ್‌ ಜಾರಕಿಹೊಳಿ

ರಾಯಬಾಗ: ರಾಯಬಾಗ ವಿಧಾನಸಭಾ ಕ್ಷೇತ್ರದ ಜಾಗನೂರ ಗ್ರಾಮದ ಶ್ರೀ ಸಿದ್ಧಾರೂಢ ಮಠಕ್ಕೆ ಇಂದು ಯುವ ನಾಯಕ, ಸತೀಶ್‌ ಶುಗರ್ಸ್‌ ನಿರ್ದೇಶಕ ರಾಹುಲ್‌ ಜಾರಕಿಹೊಳಿ ಅವರು ಭೇಟಿ ನೀಡಿ ಸುಕ್ಷೇತ್ರ ಇಂಚಲದ ಶಿವಯೋಗೀಶ್ವರ ಸಾಧು ಸಂಸ್ಥಾನ ಮಠದ ಡಾ. ಶಿವಾನಂದ ಭಾರತಿ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ನಂತರ ತಾಲೂಕಿನ ಜಾಗನೂರ, ಕಂಕಣವಾಡಿ, ಹುಬ್ಬರವಾಡಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಸನ್ಮಾನ ಸ್ವೀಕರಿಸಿ ಮಾತನಾಡಿದ ಯುವ ನಾಯಕ ರಾಹುಲ್‌ ಜಾರಕಿಹೊಳಿ, ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಇಂದಿನಿಂದಲೇ ಕಾರ್ಯಕರ್ತರು ಸೈನಿಕರಂತೆ ಕೆಲಸ ಮಾಡಿ, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಬೇಕೆಂದು ಮನವಿ ಮಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆ ಇದೆ. ಕಾರಣ ಈ ಅವಕಾಶವನ್ನು ಸದುಪಯೋಗ ಪಡೆಯುವ ಮೂಲಕ ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಬಾವುಟ ಹಾರಿಸೋಣ ಎಂದರು. 

 

ಇದೇ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಯುವ ನಾಯಕ, ಸತೀಶ್‌ ಶುಗರ್ಸ್‌ ನಿರ್ದೇಶಕ ರಾಹುಲ್‌ ಜಾರಕಿಹೊಳಿ ಅವರನ್ನು ಸತ್ಕರಿಸಿದರು. ಹಾಗೂ ಬೈಕ್‌ ರ್ಯಾಲಿ ಮೂಲಕ ಸ್ವಾಗತಿಸಿದರು.  

ಈ ಸಂದರ್ಭದಲ್ಲಿ ಕಾಂಗ್ರೆಸ್‌ ಮುಖಂಡ ಮಹಾವೀರ ಮೋಹಿತೆ, ಅರ್ಜುನ ನಾಯಕವಾಡಿ, ರಾಯಬಾಗ ತಾಲೂಕಿನ ಜಾಗನೂರ, ಕಂಕಣವಾಡಿ, ಹುಬ್ಬರವಾಡಿ ಗ್ರಾಮಗಳ ಮೂಂಚೂಣಿ ಘಟಕದ ಪದಾಧಿಕಾರಿಗಳು ಇದ್ದರು.///////