Belagavi News In Kannada | News Belgaum

ವಿದ್ಯುತ್ ವ್ಯತ್ಯಯ

ಬೆಳಗಾವಿ, ಮಾ.22 : ಕ.ವಿ.ಪ್ರ.ನಿ.ನಿ. ವತಿಯಿಂದ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಮಾ.23 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ವರೆಗೆ ಕೈಗೊಳ್ಳುತ್ತಿದ್ದಾರೆ. ಸದರಿ 33ಕೆ.ವ್ಹಿ. ಲೋಂಡಾ ಹಾಗೂ ಖಾನಾಪೂರ ಉಪಕೇಂದ್ರದಿಂದ ಮತ್ತು 110 ಕೆ.ವ್ಹಿ. ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ಲೈಲಾ ಶುಗರ ಕಾರ್ಖಾನೆ, ದೇವಲತ್ತಿ, ಬಿದರಭಾವಿ, ಭಂಡಾರಗಾಳಿ, ಗರ್ಲಗುಂಜಿ, ತೋಪಿನಕಟ್ಟಿ, ಬೋರಗಾಂವ, ನಿಡಗಲ, ದೊಡ್ಡಹೊಸೂರ, ಸಣ್ಣಹೊಸೂರ, ಕರಂಬಳ, ಜಳಗಾ, ಕುಪ್ಪಟಗಿರಿ, ಲೋಕೋಳ್ಳಿ, ಲಕ್ಕೇಬೈಲ, ಯಡೋಗಾ, ಬಳೋಗಾ, ಜೈನಕೊಪ್ಪ, ಗಾಂಧಿನಗರ, ಹಲಕರ್ಣಿ, ಕೋರ್ಟ ಪ್ರದೇಶ, ಕೈಗಾರಿಕಾ ಪ್ರದೇಶ, ಬಾಚೋಳ್ಳಿ, ಕೌಂದಲ, ಝಾಡನಾವಗಾ, ಲಾಲವಾಡಿ, ಹೆಬ್ಬಾಳ, ನಂದಗಡ, ಕಸಬಾ ನಂದಗಡ, ಕಾರಲಗಾ, ಶಿವೊಳ್ಳಿ ಹಾಗೂ ಚಾಪಗಾಂವ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‍ಸೆಟ್‍ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

33ಕೆ.ವ್ಹಿ. ಲೋಂಡಾ ಹಾಗೂ ಖಾನಾಪೂರ ಉಪಕೇಂದ್ರದಿಂದ ಸರಬರಾಜು ಆಗುವ ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾಟ್ರೆ, ಭಾಲ್ಕೆ ಬಿ.ಕೆ, ಭಾಲ್ಕೆ ಕೆ.ಎಚ್, ಶಿಂದೋಳ್ಳಿ, ಹೊನ್ಕಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ, ಡೋಕೆಗಾಳಿ, ಖಾನಾಪೂರ ಪಟ್ಟಣ, ಶಿವಾಜಿ ನಗರ, ರುಮೇವಾಡಿ, ಓತೋಳ್ಳಿ, ಮೊದೇಕೊಪ್ಪ, ನಾಗುರ್ಡಾ, ರಾಮಗುರವಾಡಿ, ಅಂಬೋಳಿ, ಹರಸನವಾಡಿ, ಅಸೋಗಾ, ನೇರಸಾ, ಅಶೋಕ ನಗರ, ಮಂತುರ್ಗಾ, ಶೇಡೇಗಾಳಿ ಹಾಗೂ ಹೆಮ್ಮಡಗಾ ಪ್ರದೇಶಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‍ಸೆಟ್‍ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕಾರ್ಯ ಮತ್ತು ಪಾಲನಾ ಗ್ರಾಮೀಣ ವಿಭಾಗ, ಹುವಿಸಕಂನಿ ಕಾರ್ಯನಿರ್ವಾಹಕ ಇಂಜಿನೀಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆ: ಹೆಚ್ಚುವರಿ ಬಸ್ ಸೌಲಭ್ಯ

ಬೆಳಗಾವಿ,ಮಾ.22 : 2024-25 ನೇ ಸಾಲಿನ ಶ್ರೀ.ಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ಜಾತ್ರೆಯ ಪ್ರಯುಕ್ತ ಅಥಣಿ, ರಾಯಬಾಗ, ಗೋಕಾಕ, ಹುಕ್ಕೇರಿ, ಚಿಕ್ಕೋಡಿ, ಸಂಕೇಶ್ವರ ಹಾಗೂ ನಿಪ್ಪಾಣಿ ಘಟಕಗಳಿಂದ ಹೆಚ್ಚುವರಿ ಸಾರಿಗೆಗೆ ಸುಸಜ್ಜಿತ ವಾಹನಗಳ ಸೌಲಭ್ಯವನ್ನು ಒದಗಿಸಲಾಗುವುದು.
ಪ್ರಾಸಂಗಿಕ ಕರಾರಿನಲ್ಲಿ ಶ್ರೀ ಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ದರ್ಶನದ ಜೊತೆಗೆ ಕೂಡಲಸಂಗಮ ಬದಾಮಿ, ಮಂತ್ರಾಲಯ, ಮಹಾನಂದಿ, ಬಸವಕಲ್ಯಾಣ ಮುಂತಾದ ಸ್ಥಳಗಳಿಗೆ ಭೇಟಿ ನೀಡಬಹುದಾಗಿದೆ. ಪಾದಯಾತ್ರೆ ಹೊದಂತಹ ಭಕ್ತಾಧಿಗಳಿಗೆ ಶ್ರೀಶೈಲ ಜಾತ್ರೆಯಿಂದ ಮರಳಿ ಬರುವಾಗ ವಿಭಾಗದಿಂದ ವಿಶೇಷ ವಾಹನಗಳ ಸೌಲಭ್ಯ ಒದಗಿಸಲಾಗುವುದು. ಯಾತ್ರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಾಕರಸಾ ಸಂಸ್ಥೆಯ ಚಿಕ್ಕೋಡಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಶಶಿಧರ ಎಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.///

 

ವಿದ್ಯುತ್ ಪ್ರಸರಣ: ಸಾರ್ವಜನಿಕರ ಗಮನಕೆ

ಬೆಳಗಾವಿ,ಮಾ.22: ಬೆಳಗಾವಿ ಜಿಲ್ಲೆಯ ಆಥಣಿ ತಾಲೂಕಿನಲ್ಲಿ ಕವಿಪ್ರನಿನಿಯು ಹಾಲಿ ಚಾಲ್ತಿಯಲ್ಲಿರುವ 110 ಕೆ.ವಿ 2ನೇ ವಿದ್ಯುತ್ ಪ್ರಸರಣ ಮಾರ್ಗವನ್ನು 220 ಕೆ.ವಿ ಅಥಣಿ ವಿದ್ಯುತ್ ಕೇಂದ್ರದಿಂದ 110ಕೆ.ವ್ಹಿ ಐಗಳಿ ವರೆಗೆ ಜೋಡಿ ಗೋಪುರಗಳ ಮೇಲೆ 21.493 ಕಿ.ಮೀ ಉದ್ದದ ಒಂಟಿ ಪ್ರಸರಣ ಮಾರ್ಗವನ್ನು ನಿರ್ಮಿಸಲಾಗಿದೆ.
ಸದರಿ 110 ಕೆವಿ ವಿದ್ಯುತ್ ಪ್ರಸರಣ ಮಾರ್ಗವು ಬೆಳಗಾವಿ ಜಿಲ್ಲೆಯ, ಆಥಣಿ ತಾಲೂಕಿನ ಅಥಣಿ, ಕೊಟಗೇರಿ, ಬಡಚಿ, ದೇಸಾಯಿರಟ್ಟಿ, ಎಲಿಹಡಗಲಿ, ಐಗಳಿ ಹಾಗೂ ಅಕ್ಕಪಕ್ಕದ ಹದ್ದಿನಲ್ಲಿ ಬರುವ ಹಳ್ಳಿಗಳು ಮತ್ತು ಸರಹದ್ದಿನ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಹಾಯ್ದು ಹೋಗುತ್ತದೆ.
ಸದರಿ ವಿದ್ಯುತ್ ಪ್ರಸರಣ ಮಾರ್ಗವನ್ನು ಏ.5 ಇಲ್ಲವೆ ತದನಂತರ ಯಾವುದೇ ಕ್ಷಣದಲ್ಲಿ ವಿದ್ಯುತ್‍ನ್ನು ಹರಿಬಿಡಲಾಗುವದು ಕಾರಣ ವಿದ್ಯುತ್ ಗೋಪುರಗಳನ್ನು ಹತ್ತುವುದಾಗಲಿ ಅಥವಾ ತಂತಿಗಳನ್ನು ಮುಟ್ಟುವುದಾಗಲಿ ಹಸಿರು ಟೊಂಗೆಗಳನ್ನು ಎಸೆಯುವುದಾಗಲಿ ಮತ್ತು ಲೈನ್ ಕೆಳಗಡೆ ದನಕರುಗಳನ್ನು ಕಟ್ಟುವುದಾಗಲಿ, ಗಿಡಮರಗಳನ್ನು ನೆಡುವುದಾಗಲಿ, ಮನೆ/ಗುಡಿಸಲುಗಳನ್ನು ನಿರ್ಮಿಸುವುದಾಗಲಿ ಪ್ರಾಣಾಪಾಯಕವಾಗುವುದು. ಒಂದು ವೇಳೆ ಇಂತಹ ಕೃತ್ಯಗಳನ್ನು ಯಾರಾದರು ಎಸಗಿದಲ್ಲಿ ಮುಂದೆ ಒದಗಬಹುದಾದ ಅಪಾಯಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತವು ಜವಾಬ್ದಾರಿಯಾಗಿರುವುದಿಲ್ಲ ಎಂದು ಬೃಹತ್ ಕಾಮಗಾರಿ ವಿಭಾಗ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬೆಳಗಾವಿಯ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.///

 

ವಿದ್ಯುತ್ ವ್ಯತ್ಯಯ

ಬೆಳಗಾವಿ,ಮಾ.22 : ಮಾ. 24 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಕ.ವಿ.ಪ್ರ.ನಿ.ನಿ. ವತಿಯಿಂದ 110 ಕೆ.ವಿ ಎಮ್. ಕೆ. ಹುಬ್ಬಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಹಾಗೂ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ಸದರಿ ಉಪಕೇಂದ್ರದಿಂದ ಸರಬರಾಜು ಆಗುವ ಹಿರೇಮುನವಳ್ಳಿ, ಚಿಕ್ಕಮುನವಳ್ಳಿ, ಗಾಡಿಕೊಪ್ಪ, ಜಿಕನೂರ, ಪಾರಿಶ್ವಾಡ, ಇಟಗಿ, ಬೋಗೂರ, ಬೇಡರಹಟ್ಟಿ, ಹಿರೇಹಟ್ಟಿಹೊಳಿ, ಚಿಕ್ಕಹಟ್ಟಿಹೊಳಿ ಹಾಗೂ ಕರವಿನಕೊಪ್ಪ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‍ಸೆಟ್‍ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
33 ಕೆ.ವ್ಹಿ. ಗಂದಿಗವಾಡ ಉಪಕೇಂದ್ರದಿಂದ ಸರಬರಾಜು ಆಗುವ ಗಂದಿಗವಾಡ, ಹಿರೇ ಅಂಗ್ರೋಳ್ಳಿ, ಚಿಕ್ಕ ಅಂಗ್ರೊಳ್ಳಿ, ಹಂದೂರ, ಕೇರವಾಡ, ಹುಲಿಕೊತ್ತಲ, ಇಟಗಿ, ಬೋಗೂರ, ಬೇಡರಹಟ್ಟಿ, ತೊಲಗಿ, ಬಿಳಕಿ, ಅವರೊಳ್ಳಿ ಹಾಗೂ ಕಗ್ಗಣಗಿ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್‍ಸೆಟ್‍ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಕಾರ್ಯ ಮತ್ತು ಪಾಲನಾ ಗ್ರಾಮೀಣ ವಿಭಾಗ, ಹುವಿಸಕಂನಿ ಕಾರ್ಯನಿರ್ವಾಹಕ ಇಂಜಿನೀಯರರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.////