Belagavi News In Kannada | News Belgaum

ಇಂದಿನಿಂದ ಮೂರು ದಿನಗಳ ಕಾಲ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ ರಾಜ್ಯದಲ್ಲಿ ಇಂದಿನಿಂದ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಮೂರು ದಿನಗಳ ಕಾಲ ವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ,ಕೊಡಗು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ..

 

ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಮಂಡ್ಯ ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ ಮುಂದಿನ ನಾಲ್ಕು ದಿನಗಳಲ್ಲಿ ದಕ್ಷಿಣ ಒಳನಾಡಿನಲ್ಲಿu ಸಣ್ಣ ಪ್ರಮಾಣದ ಮಳೆ ಬೀಳುವ ಸಾಧ್ಯತೆ ಇದೆ ಎಂದು ತಿಳಿದಿದೆ ಕರಾವಳಿ ಮಲೆನಾಡು ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆ ಆಗಲಿದೆ..

ಮುಂದಿನ 4 ದಿನಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗಬಹುದು. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ, ಬೀದರ್, ಬಾಗಲಕೋಟೆ, ಕಲಬುರಗಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾದ ಕಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.