Belagavi News In Kannada | News Belgaum

ಚುನಾವಣಾ ಕಾರ್ಯಗಳಿಗೆ ಮಕ್ಕಳನ್ನು ಬಳಸದಂತೆ ಆದೇಶ

ಬೆಳಗಾವಿ,ಮಾ.26: ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಕಾರ್ಯಗಳಿಗೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲು ಮುಖ್ಯ ಚುನಾವಣಾಧಿಕಾರಿಯವರು ಕಛೇರಿ ಬೆಂಗಳೂರುರವರು ಸೂಚಿಸಿರುತ್ತಾರೆ.
ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ & ನಿಯಂತ್ರಣ) ಕಾಯ್ದೆ 1986 ರನ್ವಯ ಯಾವುದೇ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಹಾಗೂ 14 ರಿಂದ 18 ವಯಸ್ಸಿನ ಕಿಶೋರ ಕಾರ್ಮಿಕ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಬಾಲ ನ್ಯಾಯ (ಆರೈಕೆ & ರಕ್ಷಣೆ) ಕಾಯ್ದೆ 2015 ಹಾಗೂ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಒಡಂಬಡಿಕೆ 1989ರನ್ವಯ ಮಕ್ಕಳನ್ನು ಅವರ ಅಭಿವೃದ್ದಿಗೆ ಹಾನಿ ಮಾಡುವ ಯಾವುದೇ ಚಟುವಟಿಕೆಗಳಿಂದ ರಕ್ಷಿಸಬೇಕು ಎಂದು ತಿಳಿಸುತ್ತದೆ.
ಈಗ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ವಿವಿಧ ರಾಜಕೀಯ ಪಕ್ಷಗಳು ಬಹು ವಿದಧ ಚಟುವಟಿಕೆಗಳಲ್ಲಿ ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಅಂದರೆ ಮಕ್ಕಳು ಯಾವುದೇ ಚುನಾವಣಾ ಪ್ರಚಾರದಲ್ಲಿ ಬಳಸದಂತೆ ಕರಪತ್ರ ಹಾಗೂ ಪೋಸ್ಟರ್ ಹಂಚಲು ಅಥವಾ ಘೋಷಣೆ ಕೂಗುವುದು, ಚುನಾವಣಾ ಸಭೆ, ಬಡಿಂಗ್ಸ ಕಟ್ಟುವುದು, ಪ್ರಚಾರ ವಾಹನದ ಮೇಲೆ ಮಕ್ಕಳನ್ನು ಕೂರಿಸುವುದು, ಪ್ರಚಾರ ಸಭೆಗಳಲ್ಲಿ ಮಕ್ಕಳನ್ನು ಬಳಸದಂತೆ ನಿರ್ದೇಶಿಸಲಾಗಿದೆ. ಮುಂದುವರಿದು ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಗೆ ಯಾವುದೇ ಪಕ್ಷಗಳು ಚುನಾವಣೆ ಮತ್ತು ಪ್ರಚಾರ ಕಾರ್ಯಗಳಲ್ಲಿ 18 ವಯಸ್ಸಿನೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ಕ್ರಮ ವಹಿಸಲು ಹಾಗೂ ಉಲ್ಲಂಘನೆ ಕಂಡು ಬಂದಲ್ಲಿ ಕಾಯ್ದೆಯ ಕಲಂ ಅನ್ವಯ ಅಗತ್ಯ ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಮಕ್ಕಳ ಸಹಾಯವಾಣಿ 1098/112, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಲಾಗಿದೆ.