Belagavi News In Kannada | News Belgaum

ಗೋ ಬ್ಯಾಕ್ ಸಂಧಾನಕ್ಕಾಗಿ ಇಂದು ರಾತ್ರಿ ದಿಢೀರ್ ಬೆಳಗಾವಿಗೆ ಬಿಎಸ್‌ ವೈ

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಟಿಕೆಟ್ ನೀಡಿರುವ ವಿಚಾರದಲ್ಲಿ ಬೆಳಗಾವಿಯ ಸ್ಥಳೀಯ ಬಿಜೆಪಿ ನಾಯಕರು ನಡೆಸಿದ್ದ ಗೋ ಬ್ಯಾಕ್ ಚಳವಳಿ ಹಿನ್ನೆಲೆಯಲ್ಲಿ ಅವರನ್ನು ಸಮಾಧಾನಪಡಿಸಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಬೆಳಗಾವಿಗೆ ಆಗಮಿಸುತ್ತಿದ್ದಾರೆ.,

ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಕಣಕ್ಕಿಳಿಯಲು ಬಯಸಿದ್ದ ಆಕಾಂಕ್ಷಿಗಳ ಭೇಟಿಯಾಗಲು ನಿರ್ಧರಿಸಿರುವ ಯಡಿಯೂರಪ್ಪ ಅವರು ಅವರೆಲ್ಲರ ಜೊತೆ ಮಾತುಕತೆ ನಡೆಸಿ ಸಮಾಧಾನಪಡಿಸಲಿದ್ದಾರೆ. ಬೆಳಗಾವಿಯ ಯುಕೆ 27 ಹೋಟೆಲ್ ನಲ್ಲಿ ಸಭೆ ನಿಗದಿಯಾಗಿದೆ. ಬೆಳಗಾವಿಯ ಬಿಜೆಪಿ ನಾಯಕರು ಈ ಮಹತ್ವದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಯಡಿಯೂರಪ್ಪ ಇಂದು ರಾತ್ರಿ ಬೆಳಗಾವಿಗೆ ಆಗಮಿಸುವ ಕಾರ್ಯಕ್ರಮ ನಿಗದಿಯಾಗಿದ್ದು ಯಾವುದೇ ಭಿನ್ನಮತ ಸೃಷ್ಟಿ ಆಗದಂತೆ ನೋಡಿಕೊಳ್ಳಲು ನಾಯಕರಿಗೆ ಸೂಚಿಸಲಿದ್ದಾರೆ.