Belagavi News In Kannada | News Belgaum

ಶೂನ್ಯ ಸಂಪಾದನ ಮಠಕ್ಕೆ ಸಚಿವೆ ಲಕ್ಷ್ಮೀ ಭೇಟಿ

ಗೋಕಾಕ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳಕರ್‌ ಅವರು ಗುರುವಾರ ನಗರದ ಶ್ರೀ ಶೂನ್ಯ ಸಂಪಾದನ ಮಠಕ್ಕೆ ಭೇಟಿ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದರು.

ಇದೇ ಸಂದರ್ಭದಲ್ಲಿ ಮುರುಘರಾಜೇಂದ್ರ ಮಹಾಸ್ವಾಮಿಗಳು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ ಅವರಿಗೆ ಸತ್ಕರಿಸಿ, ಗೌರವಿಸಿದರು .

ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ,  ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸಿದ್ದಲಿಂಗ ದಳವಾಯಿ, ಕಾಂಗ್ರೆಸ್ ಮುಖಂಡ ಚಂದ್ರಶೇಖರ್ ಕೊಣ್ಣೂರ , ಡಾ. ಮಹಾಂತೇಶ ಕಡಾಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು./////