Belagavi News In Kannada | News Belgaum

ಕೈ ಗ್ಯಾರಂಟಿಯಿಂದ ಎಲ್ಲ ಧರ್ಮದ ಮಹಿಳೆಯರಿಗೆ ಅನುಕೂಲ: ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ

ಗೋಕಾಕ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೆ ತಂದು ತಾನು ಕೊಟ್ಟ ಭರವಸೆ ಈಡೇರಿಸಿದೆ. ಈ ಯೋಜನೆಗಳಿಂದ  ಎಲ್ಲ ಜಾತಿ ಹಾಗೂ ಧರ್ಮದ ಮಹಿಳೆಯರಿಗೆ  ಅನುಕೂಲವಾಗಿದೆ ಎಂದು ಚಿಕ್ಕೋಡಿ ಲೋಕಸಭಾ  ಕೈ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಹೇಳಿದರು.

ಗೋಕಾಕ ನಗರದ ಹಿಲ್ ಗಾರ್ಡನ್ ನಿವಾಸದಲ್ಲಿ ಚಿಕ್ಕೋಡಿ ಲೋಕಸಭೆ ವಿವಿಧಡೆಯಿಂದ ಆಗಮಿಸಿ ಮಹಿಳಾ ಸಂಘಟನೆಯ ಮುಖಂಡರು ಕಾರ್ಯಕರ್ತರನ್ನು ಭೇಟಿಯಾಗಿ ಪಕ್ಷ ಸಂಘಟನೆಯ ಕುರಿತು ಚರ್ಚಿಸಿ ನಂತರ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ‌ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಇಂದು ಪರಿಣಾಮಕಾರಿ ಅನುಷ್ಠಾನಗೊಂಡಿವೆ. ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗಲಿದೆ. ರಾಜ್ಯದಲ್ಲಿ  ಕಾಂಗ್ರೆಸ್‌ ಪಕ್ಷದ ಪರ ಅಲೆಯಿದ್ದು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆೆ. ಆದ್ದರಿಂದ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲು  ನನಗೆ ಒಂದು ಭಾರಿ ಅವಕಾಶ ನೀಡಿಬೇಕು ಎಂದು ಮಹಿಳೆಯರಲ್ಲಿ ಮನವಿ ಮಾಡಿದರು.

ಶೈಕ್ಷಣಿಕ ಸೇರಿದಂತೆ ಕ್ರೀಡಾ ಪಟುಗಳಿಗೆ ಹಾಗೂ ಮಹಿಳೆಯರಿಗೆ  ಸತೀಶ ಜಾರಕಿಹೊಳಿ ಫೌಂಡೇಶನ್‌ ದಿಂದ ಸಹಾಯ-ಸಹಕಾರ ಮಾಡಲಾಗಿದೆ. ನಿಮ್ಮ ಮನೆ ಮಗಳೆಂದು ಮತದಾರರು ಸಹಕರಿಸಬೇಕು. ಈ ಕ್ಷೇತ್ರದಿಂದ ಗೆಲ್ಲಲು ಶಕ್ತಿ ತುಂಬಬೇಕು ಎಂದ ಅವರು, ಬೇರುಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಮಹಿಳೆಯರು ಸಿದ್ದರಾಗಬೇಕು. ಈ ಭಾರಿ ಜಿಲ್ಲೆ ಸೇರಿದಂತೆ ದೇಶದ ಅಭಿವೃದ್ಧಿಗೆ ಕಾರಣವಾಗಿರುವ ಕಾಂಗ್ರೆಸ್ ಪಕ್ಷದ ಗೆಲುವಿಗೆ ಪಣತೊಟ್ಟು ನನ್ನ ಆಯ್ಕೆಗೆ  ಮಹಿಳಾ ಮಣಿಗಳು ಮುಂದಾಗಬೇಕು ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ ಮಹಿಳೆಯರು ಇದ್ದರು./////