Belagavi News In Kannada | News Belgaum

ಅಭ್ಯರ್ಥಿ ಗೆಲ್ಲಿಸಿ, ಇತಿಹಾಸ ರಚಿಸೋಣ: ಸಚಿವ ಸತೀಶ್‌ ಜಾರಕಿಹೊಳಿ

ರಾಯಬಾಗ: ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರನ್ನು ನಾವೆಲ್ಲರೂ ಒಟ್ಟಾಗಿ ಲೋಕಸಭೆಗೆ ಆಯ್ಕೆ ಮಾಡುವ ಮೂಲಕ ಇತಿಹಾಸ ರಚಿಸೋಣ ಎಂದು  ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ರಾಯಬಾಗ ತಾಲೂಕಿನ ನಸಲಾಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಸನ್ಮಾನ್‌ ಸ್ವೀಕರಿಸಿ ಮಾತನಾಡಿದ ಅವರು, ಪ್ರಿಯಂಕಾ ಜಾರಕಿಹೊಳಿ ಅವರು ವಯಸ್ಸಿನಲ್ಲಿ ಚಿಕ್ಕವರಿದ್ದರೂ ಸಾಮಾಜಿಕ ಸೇವೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ನಾಲ್ಕೈದು ವರ್ಷಗಳಿಂದ ಜನಸಂಪರ್ಕದಲ್ಲಿದ್ದಾರೆ, ಅವರ ಗೆಲುವಿಗೆ ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದು ಮನವಿ ಮಾಡಿದರು.

 

ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ, ಈ ಹಿಂದೆ ಕೇಂದ್ರದಲ್ಲಿ ಅಧಿರದಲ್ಲಿ ಇದ್ದಾಗ ಹಲವು ಕೆಲಸಗಳನ್ನು‌ ಮಾಡಿದೆ. ಆದರೆ ಪ್ರಚಾರ ಕೈಗೊಂಡಿಲ್ಲ. ಬಿಜೆಪಿಯವರಂತೆ ಸುಳ್ಳು ಹೇಳಿ ಚುನಾವಣೆಯಲ್ಲಿ ಗೆಲ್ಲುವ ಅವಶ್ಯಕತೆ ನಮಗಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಜನಸಾಮಾನ್ಯರನ್ನು ಮೇಲೆತ್ತುವ ಕೆಲಸ ಮಾಡಿದೆ. ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ಪ್ರಿಯಂಕಾ ಜಾರಕಿಹೊಳಿಗೆ ಅವರನ್ನು ಗೆಲ್ಲಿಸಬೇಕು ಎಂದರು.

ರಾಜ್ಯ ಸರ್ಕಾರದ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಈ ಕಾರಣಕ್ಕಾಗಿ ಜನರು ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್‌ ಸರ್ಕಾರದ ಜನಪರ ಯೋಜನೆಗಳನ್ನು ಮೆಚ್ಚುತ್ತಾರೆ. ಬಡವರ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಹಗಲಿರುಳೆನ್ನದೆ ದುಡಿಯುತ್ತಿದೆ. ಕಾರಣ ರಾಜ್ಯ ಸರ್ಕಾರದ, ಕಾಂಗ್ರೆಸ್ ಪಕ್ಷದ ಕಾರ್ಯಗಳನ್ನು ಮೆಚ್ಚಿ ಇಂದು ನಸಲಾಪುರದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಹಲವರು ಸೇರ್ಪಡೆಯಾಗುತ್ತಿದ್ದರಿಂದ ಖುಷಿ ತಂದಿದ್ದು, ಜನರ ಅಭಿವೃದ್ಧಿಗಾಗಿ ದುಡಿಯೋಣ ಎಂದು ತಿಳಿಸಿದರು.

ಮುಖಂಡರಾದ ಡಾ. ಎನ್.ಎ. ಮಗದುಮ್ ಮಾತನಾಡಿ,  ಪ್ರಿಯಂಕಾ ಜಾರಕಿಹೊಳಿ ಅವರು ಯಮಕನಮರಡಿ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರ ಮಾದರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ನಾವು ಗೆಲ್ಲಿಸೋಣ ಎಂದರು.

ಇದೇ ವೇಳೆ ಅಪಾರ ಸಂಖ್ಯೆಯ ಬಿಜೆಪಿ ಕಾರ್ಯಕರ್ತರನ್ನು ಸಚಿವ ಸತೀಶ ಜಾರಕಿಹೊಳಿ ಅವರು ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಕಾಂಗ್ರೆಸ್‌ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಯುವ ನಾಯಕ ರಾಹುಲ್‌ ಜಾರಕಿಹೊಳಿ, ಮಾಜಿ ಶಾಸಕ ಎಸ್.ಬಿ. ಘಾಟಗೆ,  ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ, ಬೆಳಗಾವಿ ಬೂಡಾ ಅಧ್ಯಕ್ಷ  ಲಕ್ಷ್ಮಣರಾವ್ ಚಿಂಗಳೆ, ಮಾಜಿ ಸಚಿವ ವೀರಕುಮಾರ ಪಾಟೀಲ್‌,  ಯುವ ನಾಯಕ್ ರಾಹುಲ್‌ ಜಾರಕಿಹೊಳಿ, ಕಾಂಗ್ರೆಸ್‌ ಮುಖಂಡರಾದ ಮಹಾವೀರ ಮೋಹಿತೆ, ಡಾ ಎನ್.ಎಮ್. ಮಗದುಮ್ಮ, ಯಲ್ಲಪ್ಪ ಶಿಂಗೆ, ರಾಜು ಪಾಟೀಲ್‌, ಅಪ್ಪಾಸಾಹೇಬ ಕುಲಗೊಡೆ, ಸಿದ್ದಾರೂಢ ಬಂಡಗರ, ಹಾಜಿ ಮುಲ್ಲಾ, ಸತ್ತಾರ ಮುಲ್ಲಾ, ಅರ್ಜುನ್ ನಾಯಿಕವಾಡಿ, ರಾಜು ಪಾಟೀಲ ಸೇರಿದಂತೆ‌ ನೂರಾರು ಕಾಂಗ್ರೆಸ್‌ ಮುಖಂಡರು, ಕಾಂಗ್ರೆಸ್‌ ಕಾರ್ಯಕರ್ತರು, ಅಪಾರ ಸಂಖ್ಯೆಯ ಮಹಿಳೆಯರು ಇದ್ದರು.