Belagavi News In Kannada | News Belgaum

ಬೆಳಗಾವಿ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಮಾಜಿ ಸಚಿವ, ಕೆಎಂಎಫ್ ಮಾಜಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ..

ಸೋಮವಾರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಇತ್ತು. ಆದರೆ ಬಾಲಚಂದ್ರ ಜಾರಕಿಹೊಳಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರು ಆಯ್ಕೆಯಾಗಿರುವುದಾಗಿ ಘೋಷಿಸಲಾಯಿತು. ಒಟ್ಟೂ 16 ನಿರ್ದೇಶಕರಲ್ಲಿ 13 ನಿರ್ದೇಶಕರು ಬಾಲಚಂದ್ರ ಜಾರಕಿಹೊಳಿ ಬೆಂಬಲಿತರು. ಮುಂದಿನ 5 ವರ್ಷದವರೆಗೆ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷರಾಗಿರಲಿದ್ದಾರೆ.

ಈ ವೇಳೆ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ಎಲ್ಲರೂ ಸೇರಿ ನಾನೇ ಅಧ್ಯಕ್ಷರಾಗಬೇಕೆಂದು ಒತ್ತಾಯಿಸಿದರು. ಜಿಲ್ಲಾ ಅಧ್ಯಕ್ಷರಾದವರೇ ಕೆಎಂಎಫ್ ನಿರ್ದೇಶಕರಾಗಬೇಕೆನ್ನುವ ಕಾನೂನು ರಾಜ್ಯದಲ್ಲಿ ಬರುತ್ತಿದೆ. ಹಾಗಾಗಿ ನಾನು ಇಲ್ಲಿ ಅಧ್ಯಕ್ಷನಾಗಲು ಒಪ್ಪಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೈನು ಕ್ರಾಂತಿ ಮಾಡಬೇಕು. ಬೆಳಗಾವಿಯಲ್ಲಿ ಮೆಗಾ ಡೇರಿ ಮಾಡಬೇಕೆನ್ನುವ ಉದ್ದೇಶವಿದೆ. ಇದಕ್ಕಾಗಿ ಕೇಂದ್ರ ಸರಕಾರದಿಂದ 250 ಕೋಟಿ ರೂ. ಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು..
ಮುಂದಿನ ದಿನಗಳಲ್ಲಿ ಸರಿಯಾದ ಸಮಯಕ್ಕೆ ರೈತರ ಬಿಲ್ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು. ಡೇರಿಯನ್ನು ಉನ್ನತ ಮಟ್ಟಕ್ಕೇರಿಸಲು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ಹೋಗುತ್ತಿರುವ 15 ಲಕ್ಷ ಲೀಟರ್ ಹಾಲನ್ನು ಜಿಲ್ಲೆಯಲ್ಲೇ ಉಳಿಸಿಕೊಳ್ಳಲು ಪ್ರಯತ್ನಿಸಲಾಗುವುದು ಎಂದರು.

ಎಲ್ಲ ನಿರ್ದೇಶಕರು ಉಪಸ್ಥಿತರಿದ್ದರು