Belagavi News In Kannada | News Belgaum

ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಭರ್ಜರಿ ರೋಡ್‌ ಶೋ…

ರಾಯಬಾಗ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ, ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಅಂಬೇಡ್ಕರ್ ವೃತ್ತದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.

ನಗರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ  ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಹಲವು ಗಣ್ಯರು ಪುಷ್ಪನಮನ ಸಲ್ಲಿಸಿದರು.

ಬಳಿಕ, ರಾಯಬಾಗ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಮಹಾವೀರ ಭವನದವರೆಗೂ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರು  ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಭರ್ಜರಿ ರೋಡ್ ಶೋ ನಡೆಸಿದರು.

ಇದಕ್ಕೂ ಮೊದಲು ಕಾರ್ಯಕರ್ತರು ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಶಾಲು ಹೊದಿಸಿ ಸನ್ಮಾನಿಸಿದರು. ಮೆರವಣಿಗೆ ಉದ್ದಕ್ಕೂ  ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಧ್ವಜವನ್ನು ಹಿಡಿದು ಕಾಂಗ್ರೆಸ್ ಅಭ್ಯರ್ಥಿಯ ಪರ ಘೋಷಣೆಗಳನ್ನು ಕೂಗಿದರು.